Chaturvedi Jyothishalayam Ballari

Chaturvedi Jyothishalayam Ballari We provide the best astrology services. I specialize in Professions of Astrology & vastu Shastra, Gemology. Telugu.Kannada.

 #27  #ನಕ್ಷತ್ರಗಳು_ಮತ್ತು_ಅದರ_ಗಾಯತ್ರಿ_ಮಂತ್ರಗಳು1.ಅಶ್ವಿನಿಓಂ ಶ್ವೇತವರ್ಣೈ ವಿದ್ಮಹೇ;ಸುಧಾಕರಾಯೈ ಧೀಮಹಿ;ತನ್ನೋ ಅಶ್ವಿನೇನ ಪ್ರಚೋದಯಾತ್2. ಭ...
09/03/2025

#27 #ನಕ್ಷತ್ರಗಳು_ಮತ್ತು_ಅದರ_ಗಾಯತ್ರಿ_ಮಂತ್ರಗಳು

1.ಅಶ್ವಿನಿ
ಓಂ ಶ್ವೇತವರ್ಣೈ ವಿದ್ಮಹೇ;
ಸುಧಾಕರಾಯೈ ಧೀಮಹಿ;
ತನ್ನೋ ಅಶ್ವಿನೇನ ಪ್ರಚೋದಯಾತ್

2. ಭರಣಿ
ಓಂ ಕೃಷ್ಣವರ್ಣೈ ವಿದ್ಮಹೇ;
ದಂಡಧರಾಯೈ ಧೀಮಹಿ;
ತನ್ನೋ ಭರಣೀ ಪ್ರಚೋದಯಾತ್

3. ಕೃತ್ತಿಕಾ
ಓಂ ವಣ್ಣಿದೇಹಾಯೈ ವಿದ್ಮಹೇ;
ಮಹಾತಪಾಯೈ ಧೀಮಹಿ;
ತನ್ನೋ ಕೃತ್ತಿಕಾ ಪ್ರಚೋದಯಾತ್

4.ರೋಹಿಣಿ
ಓಂ ಪ್ರಜಾವಿರುದ್ಧೈ ಚ ವಿದ್ಮಹೇ;
ವಿಶ್ವರೂಪಾಯೈ ಧೀಮಹಿ;
ತನ್ನೋ ರೋಹಿಣೀ ಪ್ರಚೋದಯಾತ್

5. ಮಗಶಿರಾ
ಓಂ ಶಶಿಶೇಖರಾಯ ವಿದ್ಮಹೇ;
ಮಹಾರಾಜಾಯ ಧೀಮಹಿ;
ತನ್ನೋ ಮಗಶೀರ್ಷಾಃ ಪ್ರಚೋದಯಾತ್

6. ಆರ್ದ್ರಾ
ಓಂ ಮಹಾಶ್ರೇಷ್ಠಾಯ ವಿದ್ಮಹೇ;
ಪಶುಂ ತನಾಯ ಧೀಮಹಿ;
ತನ್ನೋ ಆರ್ದ್ರಾ ಪ್ರಚೋದಯಾತ್

7. ಪುನರ್ವಸು
ಓಂ ಪ್ರಜಾವರುಧ್ಯೈ ಚ ವಿದ್ಮಹೇ;
ಅದಿತಿ ಪುತ್ರಾಯ ಧೀಮಹಿ;
ತನ್ನೋ ಪುನರ್ವಸು ಪ್ರಚೋದಯಾತ್

8. ಪುಷ್ಯ
ಓಂ ಬ್ರಹ್ಮವರ್ಚಸಾಯ ವಿದ್ಮಹೇ;
ಮಹಾದಿಶಾಯಾಯ ಧೀಮಹಿ;
ತನ್ನೋ ಪುಷ್ಯಃ ಪ್ರಚೋದಯಾತ್

9. ಆಶ್ಲೇಷ
ಓಂ ಸರ್ಪರಾಜಾಯ ವಿದ್ಮಹೇ;
ಮಹಾರೋಚನಾಯ ಧೀಮಹಿ;
ತನ್ನೋ ಆಶ್ಲೇಷಃ ಪ್ರಚೋದಯಾತ್

10. ಮಖ
ಓಂ ಮಹಾ ಅನಗಾಯ ವಿದ್ಮಹೇ;
ಪಿತ್ರಿಯಾದೇವಾಯ ಧೀಮಹಿ;
ತನ್ನೋ ಮಖಃ ಪ್ರಚೋದಯಾತ್

11. ಪುಬ್ಬ
ಓಂ ಅರಿಯಂನಾಯ ವಿದ್ಮಹೇ;
ಪಶುದೇಹಾಯ ಧೀಮಹಿ;
ತನ್ನೋ ಪೂರ್ವ ಫಲ್ಗುಣಿ ಪ್ರಚೋದಯಾತ್

12. ಉತ್ತರಾ
ಓಂ ಮಹಾಬಕಾಯೈ ವಿದ್ಮಹೇ;
ಮಹಾಶ್ರೇಷ್ಠಾಯೈ ಧೀಮಹಿ;
ತನ್ನೋ ಉತ್ತರ ಫಲ್ಗುಣಿ ಪ್ರಚೋದಯಾತ್

13. ಹಸ್ತ
ಓಂ ಪ್ರಯಚ್ಚತಾಯೈ ವಿದ್ಮಹೇ;
ಪ್ರಕೃಪ್ರಣೀತಾಯೈ ಧೀಮಹಿ;
ತನ್ನೋ ಹಸ್ತಾ ಪ್ರಚೋದಯಾತ್

14. ಚಿತ್ತಾ
ಓಂ ಮಹಾದೃಷ್ಟಾಯೈ ವಿದ್ಮಹೇ;
ಪ್ರಜಾರಪಾಯೈ ಧೀಮಹಿ;
ತನ್ನೋ ಚೈತ್ರಾಃ ಪ್ರಚೋದಯಾತ್

15. ಸ್ವಾತಿ
ಓಂ ಕಾಮಸಾರಾಯೈ ವಿದ್ಮಹೇ;
ಮಹಾನಿಷ್ಠಾಯೈ ಧೀಮಹಿ;
ತನ್ನೋ ಸ್ವಾತಿ ಪ್ರಚೋದಯಾತ್

16. ವಿಶಾಖ
ಓಂ ಇಂದ್ರಾಗ್ನೇಸ್ಯೈ ವಿದ್ಮಹೇ;
ಮಹಾಶ್ರೇಷ್ಠಾಯೈ ಚ ಧೀಮಹಿ;
ತನ್ನೋ ವಿಶಾಖಾ ಪ್ರಚೋದಯಾತ್

17. ಅನೂರಾಧ
ಓಂ ಮಿತ್ರದೇಯಾಯೈ ವಿದ್ಮಹೇ;
ಮಹಾಮಿತ್ರಾಯ ಧೀಮಹಿ;
ತನ್ನೋ ಅನೂರಾಧಾ ಪ್ರಚೋದಯಾತ್

18. ಜ್ಯೇಷ್ಠಾ
ಓಂ ಜ್ಯೇಷ್ಠಾಯೈ ವಿದ್ಮಹೇ;
ಮಹಾಜ್ಯೇಷ್ಠಾಯೈ ಧೀಮಹಿ;
ತನ್ನೋ ಜ್ಯೇಷ್ಠಾ ಪ್ರಚೋದಯಾತ್

19 ಮೂಲ
ಓಂ ಪ್ರಜಾಧಿಪಾಯೈ ವಿದ್ಮಹೇ;
ಮಹಾಪ್ರಜಾಧಿಪಾಯೈ ಧೀಮಹಿ;
ತನ್ನೋ ಮೂಲಾ ಪ್ರಚೋದಯಾತ್

20. ಪೂರ್ವಾಷಾಢ
ಓಂ ಸಮುದ್ರ ಕಾಮಾಯೈ ವಿದ್ಮಹೇ;
ಮಹಾಬೀಜಿತಾಯೈ ಧೀಮಹಿ;
ತನ್ನೋ ಪೂರ್ವಾಷಾಢಾ ಪ್ರಚೋದಯಾತ್

21. ಉತ್ತರಾಷಾಢ
ಓಂ ವಿಶ್ವೇದೇವಾಯ ವಿದ್ಮಹೇ;
ಮಹಾಷಾಢಾಯ ಧೀಮಹಿ;
ತನ್ನೋ ಉತ್ತರಾಷಾಢಾ ಪ್ರಚೋದಯಾತ್

22. ಶ್ರವಣ
ಓಂ ಮಹಾಶ್ರೇಷ್ಠಾಯೈ ವಿದ್ಮಹೇ;
ಪುಣ್ಯಶ್ಲೋಕಾಯ ಧೀಮಹಿ;
ತನ್ನೋ ಶ್ರವಣ ಪ್ರಚೋದಯಾತ್

23. ಧನಿಷ್ಠಾ
ಓಂ ಅಗ್ರನಾಥಾಯ ವಿದ್ಮಹೇ;
ವಸೂಪ್ರೀತಾಯ ಧೀಮಹಿ;
ತನ್ನೋ ಶರ್ವಿಷ್ಠಾ ಪ್ರಚೋದಯಾತ್

24. ಶತಭಿಷ
ಓಂ ಭೇಷಜಾಯ ವಿದ್ಮಹೇ;
ವರುಣದೇಹಾಯ ಧೀಮಹಿ;
ತನ್ನೋ ಶತಭಿಷಾ ಪ್ರಚೋದಯಾತ್

25. ಪೂರ್ವಾಭಾದ್ರ
ಓಂ ತೇಜಸ್ಕರಾಯ ವಿದ್ಮಹೇ;
ಅಜರಕ ಪಾದಾಯ ಧೀಮಹಿ;
ತನ್ನೋ ಪೂರ್ವಪ್ರೋಷ್ಟಪತ ಪ್ರಚೋದಯಾತ್

26. ಉತ್ತರಾಭಾದ್ರ
ಓಂ ಅಹಿರಬುಧ್ನಾಯ ವಿದ್ಮಹೇ;
ಪ್ರತಿಷ್ಠಾಪನಾಯ ಧೀಮಹಿ;
ತನ್ನೋ ಉತ್ತರಪ್ರೋಷ್ಟಪತ ಪ್ರಚೋದಯಾತ್

27. ರೇವತಿ
ಓಂ ವಿಶ್ವರೂಪಾಯ ವಿದ್ಮಹೇ;
ಪೂಷ್ಣ ದೇಹಾಯ ಧೀಮಹಿ;
ತನ್ನೋ ರೇವತಿ ಪ್ರಚೋದಯಾತ್...

 #ಮಕ್ಕಳಿಗೆ_ಹೇಳಿಕೊಡುವ_ಶ್ಲೋಕಗಳುಬೆಳಗ್ಗೆ ಎದ್ದಾಗ:ಕರಾಗ್ರೇ ವಸತೇ ಲಕ್ಷ್ಮಿಃ, ಕರಮಧ್ಯೇ ಸರಸ್ವತಿ,ಕರಮೂಲೇ ಸ್ಥಿತಾಗೌರಿ, ಪ್ರಭಾತೇ ಕರದರ್ಶನಂ |...
09/03/2025

#ಮಕ್ಕಳಿಗೆ_ಹೇಳಿಕೊಡುವ_ಶ್ಲೋಕಗಳು

ಬೆಳಗ್ಗೆ ಎದ್ದಾಗ:

ಕರಾಗ್ರೇ ವಸತೇ ಲಕ್ಷ್ಮಿಃ, ಕರಮಧ್ಯೇ ಸರಸ್ವತಿ,
ಕರಮೂಲೇ ಸ್ಥಿತಾಗೌರಿ, ಪ್ರಭಾತೇ ಕರದರ್ಶನಂ |

ಭೂದೇವಿ ಮುಟ್ಟಿ ನಮಸ್ಕಾರ ಮಾಡುವಾಗ

ಸಮುದ್ರವಸನೇ ದೇವಿ ಪರ್ವತಸ್ತನಮಂಡಲೇ
ವಿಷ್ಣುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷ್ಮಸ್ವಮೆ |

ಸೂರ್ಯ ನಮಸ್ಕಾರ:

ಉದಯೇ ಬ್ರಹ್ಮರೂಪಾಯ, ಮಧ್ಯಾಹ್ನೇತು ಮಹೆಶ್ವರಃ
ಅಸ್ತಮಾನೇ ಸ್ವಯಂವಿಷ್ಣು ತ್ರಯೀಮೂರ್ತಿ ದಿವಾಕರ |

ಸ್ನಾನ ಮಾಡುವಾಗ:

ಗಂಗೇಚಯಮುನೇ ನರ್ಮದೇ ಚೈವ ಗೋದಾವರೀ ಸರಸ್ವತೀ
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು. |

ಊಟ ಮಾಡುವಾಗ:

ಅನ್ನಪೂರ್ಣೇ ಸದಾಪೂರ್ಣೇ ಸಂಕರ ಪ್ರಾಣ್ವಲ್ಲಭೇ
ಜ್ಞಾನವೈರಾಗ್ಯ ಸಿಧ್ಯರ್ಥ್ಯಂ ಭಿಕ್ಷಾಂದೇಹಿ ಚ ಪಾರ್ವತಿ |

ಓಂ ಸಹನಾಭವತು, ಸಹನೌಭುನಕ್ತು
ಸಹವೀರ್ಯಂಕರ ವಾವಹೈ
ತೇಜಸ್ವಿನಾವ ದೀತಮಸ್ತು
ಮಾವಿದ್ವ ಶಾವ ಹೈ
ಓಂ ಶಾಂತಿ: ಶಾಂತಿಃ ಶಾಂತಿಃ

ತುಳಸಿ ಪ್ರದಕ್ಷಿಣಾ ಸ್ತೋತ್ರ:

ಪ್ರಸೀದ ತುಲಸೀ ದೇವೀ
ಪ್ರಸೀದ ಹರಿವಲ್ಲಭೇ
ಕ್ಯೀರೋದ ಮದನೋದ್ ಭೂತೇ
ತುಲಸೀಮ್ ತ್ವಮ್ ನಮಾಮ್ಯಹಮ್.

ಸಂಜೆ ದೀಪ ಹಚ್ಚುವ ವೇಳೆ:

ದೀಪಂಜ್ಯೋತಿ ಪರಬ್ರಹ್ಮ, ದೀಪಜ್ಯೋತಿ ಪರಾಯಣಂ
ದೀಪೇನ ಹ್ರಿಯತೇ ಸಂಧ್ಯಾದೀಪಂ ನಮೋಸ್ತುತೇ |

ದೀಪ ಜ್ಯೋತಿ ಪರಬ್ರಹ್ಮಮ್ ದೀಪಂ ಸರ್ವತಮೋಹಪಂ
ದೀಪೇನ ಸಾಧ್ಯತೇ ಸರ್ವಂ ಸಂಧ್ಯಾದೀಪಂ ನಮೋಸ್ತುತೇ |

ಶುಭಮ್ ಕರೋತು ಕಲ್ಯಾಣಮ್ ಆಯುರಾರೋಗ್ಯವರ್ಧನಂ |
ಸರ್ವ ಶತ್ರು ವಿನಾಶಾಯ ಸಂಧ್ಯಾದೀಪಂ ನಮೋನಮಃ ||

ಶುಭಂ ಕರೋತಿ ಕಲ್ಯಾಣಂ ಆಯುರಾರೋಗ್ಯ ದನ ಸಂಪದಃ |
ಶತ್ರು ಬುದ್ಧಿ ವಿನಾಶಾಯ ದೀಪ ಜ್ಯೋತಿರ್ ನಮೋ ನಮಃ ||

ದೀಪ ಜ್ಯೋತಿರ್ ಪರಬ್ರಹ್ಮ ದೀಪ ಜ್ಯೊತಿರ ಜನಾರ್ಧನ
ದೀಪೋ ಮೇ ಹರತು ಪಾಪಮ್ ದೀಪ ಜ್ಯೋತಿರ್ ನಮೋಸ್ತುತೆ ||

ರಾತ್ರಿ ಮಲಗುವ ಮುನ್ನ:

ರಾಮಂ, ಸ್ಕಂದಂ ಹನೂಮಂತಂ, ವೈನತೇಯಂ ವೈಕೋದರಂ
ಶಯನೇ ಯಃ ಸ್ಮರೇ ನಿತ್ಯಂ ದುಸ್ವಪ್ನಂ ತಸ್ಯನಶ್ಯತಿ |

ಬೇವು-ಬೆಲ್ಲ ತಿನ್ನುವ ಮುನ್ನ:

ಸ್ಗತಾರ್ಯುರ್ವಜ್ರದೇಹಾಯ ಸರ್ವಸಂಪತ್ಕರಾಯಚ
ಸರ್ವಾನಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ |

ಪತಿವ್ರತಾ ಸ್ತೊತ್ರ:

ಅಹಲ್ಯಾ, ದ್ರೌಪದಿ, ಸೀತಾ, ತಾರಾ, ಮಂಡೋದರೀ ತಥಾ
ಪಂಚಕನ್ಯಾಂ ಸ್ಮರೇನಿತ್ಯಂ ಮಹಾಪಾಪತಕನಾಶಂ |

ನವಗ್ರಹ ಸ್ತುತಿ:

ನಮಃ ಸೂರ್ಯಾಯ, ಚಂದ್ರಾಯ , ಮಂಗಳಾಯ, ಬುಧಾಯಚ |
ಗುರು,ಶುಕ್ರ, ಶನಿಭ್ಯಶ್ಚ್ಯ ರಾಹವೇ ಕೇತವೇ ನಮಃ ||

ಅಶ್ವತ್ಥ ವೃಕ್ಷ ಸ್ತೋತ್ರ:

ಮೂಲತೋ ಬ್ರಹ್ಮರೂಪಾಯ ಮಧ್ಯತೋ ಶಿವರೂಪಿಣಿ |
ಅಗ್ರತೋ ವಿಷ್ಣುರೂಪಾಯ ವೃಕ್ಷರಾಜಾಯತೇ ನಮಃ ||

ಗುರು ಸ್ತುತಿ:

ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಃ
ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ

ಅಖಂಡಮಂಡಲಾಕಾರಂ ವ್ಯಾಪ್ತಂಯೇನ ಚರಾಚರಂ
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀ ಗುರುವೇ ನಮಃ

ಗಣಪತಿ ಸ್ತೋತ್ರ:

ಶುಕ್ಲಾಂ ಭರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ |
ಪ್ರಸನ್ನ ವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ ||

ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ |
ನಿರ್ವಿಘ್ನಂ ಕುರುಮೇದೇವ ಸರ್ವ ಕಾರ್ಯೇಷು ಸರ್ವದಾ ||

ಶಾಂತಿ ಮಂತ್ರ:

ಓಂ
ಅಸತೋಮ ಸದ್ಗಮಯ
ತಮಸೋಮ ಜ್ಯೋತಿರ್ಗಮಯ
ಮೃತ್ಯೋರ್ಮ ಅಮೃತಂಗಮಯ
ಓಂ ಶಾಂತಿಃ ಶಾಂತಿಃ ಶಾಂತಿಃ

ಮಂಗಳಾರತಿ ಸ್ತೋತ್ರ:

ಕರ್ಪೂರ ಗೌರಂ ಕರುಣಾವತಾರಂ
ಸಂಸಾರ ಸಾರಂ ಭುಜಗೆಂದ್ರ ಹಾರಂ
ಸದಾ ವಸಂತಂ ಹೃದಯಾರವಿಂಧೆ
ಭವಂ ಭವಾನಿ ಸಹಿತಂ ನಮಾಮಿ

ಮಂಗಳಂ ಭಗವಾನ್ ವಿಷ್ಣು ಮಂಗಳಂ ಗರುಡಧ್ವಜ |
ಮಂಗಳಂ ಪುಂಡರೀಕಾಕ್ಷ ಮಂಗಳಾಯತನೋ ಹರಿ ||

ಸರ್ವ ಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ
ಶರಣ್ಯೇ ತ್ರ್ಯಯಂಬಕೇ ದೇವಿ ನಾರಾಯಣಿ ನಮೋಸ್ತುತೇ ||

ನೀರಾಜನಂ ದರ್ಶಯಾಮಿ ದೇವ ದೇವ ನಮೋಸ್ತುತೇ
ಪ್ರಸನ್ನ ವರದೋಃ ಭೂಯಾಹ್ ವಿಶ್ವ ಮಂಗಳ ಕಾರಕ ||.....

ಹಿಂದುಗಳೆಲ್ಲರೂ ಜನಿವಾರ ಧರಿಸಬಹುದುತಲೆತಲಾಂತರದಿಂದ ಬ್ರಾಹ್ಮಣ ಗಳಿಸುತ್ತಿರುವ ಯಶಸ್ಸಿನ ಗುಟ್ಟು . ಅದುವೇ *ಯಜ್ಞೋಪವೀತ ಧಾರಣೆ* ಜನಿವಾರದ ಧರಿಸಿ...
09/03/2025

ಹಿಂದುಗಳೆಲ್ಲರೂ ಜನಿವಾರ ಧರಿಸಬಹುದು

ತಲೆತಲಾಂತರದಿಂದ ಬ್ರಾಹ್ಮಣ ಗಳಿಸುತ್ತಿರುವ ಯಶಸ್ಸಿನ ಗುಟ್ಟು . ಅದುವೇ *ಯಜ್ಞೋಪವೀತ ಧಾರಣೆ* ಜನಿವಾರದ ಧರಿಸಿದರೆ ಏನು ಪ್ರಯೋಜನ? ಬಲ ಕಿವಿಯ ಮೇಲೆ ಹಾಕಿಕೊಂಡರೆ ಏನಾಗುವುದು.! ಕೆಲವೊಂದು ನಿಯಮಗಳನ್ನು ಪಾಲಿಸಬೇಕೇ ಬೇಡವೇ. ಬ್ರಹ್ಮಗಂಟು ಎಂದರೇನು? ಗಾಯತ್ರಿ ಮಂತ್ರ ಸೂರ್ಯ ದೇವ ಕೊಟ್ಟ ವೇದ ಮಾತೆ ಯಾ ಕೊಡುಗೆ ಏನು....

ಯಜ್ಞೋಪವೀತಕ್ಕೆ ಉಪವೀತ, ಯಜ್ಞಸೂತ್ರ, ವ್ರತಬಂಧ, ಬಲಬಂಧ, ಮೊನೀಬಂಧ ಹಾಗೂ ಬ್ರಹ್ಮಸೂತ್ರ ಎಂಬ ಹಲವಾರು ಹೆಸರುಗಳಿವೆ. ಯಜ್ಞೋಪವೀತಕ್ಕೆ ಕನ್ನಡದಲ್ಲಿ ಜನಿವಾರ ಎಂದು ಕರೆಯುತ್ತಾರೆ. ಯಜ್ಞೋಪವೀತವನ್ನು ಧರಿಸುವ ಪರಂಪರೆ ಬಹಳ ಪ್ರಾಚೀನವಾದದ್ದು. ಉಪನಯನದ ಅನಂತರ ಯಜ್ಞೋಪವೀತ ಧರಿಸಲಾಗುತ್ತದೆ.

" *ಉಪನಯನ* " ಎಂದರೆ ಹತ್ತಿರಕ್ಕೆ ತರುವುದು. ಯಾರ ಹತ್ತಿರ? ಎಂದರೆ ಬ್ರಹ್ಮಜ್ಞಾನದ ಹತ್ತಿರ. ಹಿಂದೂ ಧರ್ಮದ ಶೋಡಶ ಸಂಸ್ಕಾರಗಳಲ್ಲಿ ಉಪನಯನವೂ ಒಂದು.

ಉಪನಯನ ಸಂಸ್ಕಾರದಲ್ಲಿ ಯಜ್ಞೋಪವೀತದ ಧಾರಣೆಯಾಗುತ್ತದೆ. ಉಪನಯನಕ್ಕೆ "ಯಜ್ಞೋಪವೀತ ಸಂಸ್ಕಾರ" ಎಂಬ ಹೆಸರೂ ಇದೆ. ಮುಂಡನ ಹಾಗೂ ಪವಿತ್ರ ಜಲದಲ್ಲಿ ಸ್ನಾನ ಉಪನಯನ ಸಂಸ್ಕಾರದ ಅಂಗಗಳಾಗಿವೆ.

ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿ ಅನೇಕ ನಿಯಮಗಳನ್ನು ಅನಿವಾರ್ಯವಾಗಿ ಪಾಲಿಸಲೇ ಬೇಕಾಗುತ್ತದೆ. ಒಂದು ಸಲ ಜನಿವಾರ ಧರಿಸಿದ ಮೇಲೆ ಯಾವುದೇ ಕಾರಣಕ್ಕೂ ಜನಿವಾರವನ್ನು ಧರಿಸದೇ ಬಿಡುವಂತಿಲ್ಲ. ಜನಿವಾರ ಹಳೆಯದಾದರೆ, ಅದನ್ನು ವಿಸರ್ಜಿಸಿ ಕೂಡಲೇ ಹೊಸ ಜನಿವಾರ ಧರಿಸ ಬೇಕಾಗುತ್ತದೆ.

ಪ್ರತಿಯೊಬ್ಬ ಹಿಂದುವೂ ಜನಿವಾರವನ್ನು ಧರಿಸ ಬಹುದು. ಅದಕ್ಕೆ ಯಾವುದೇ ಅಡೆತಡೆಗಳಿಲ್ಲ. ಆದರೆ ಜನಿವಾರವನ್ನು ಧರಿಸಿದ ಮೇಲೆ ಅದರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕಾಗುತ್ತದೆ. ಆಗಲೇ ಯಜ್ಞೋಪವೀತ ಧಾರಣೆಯ ಉದ್ದೇಶ ಸಫಲವಾಗುತ್ತದೆ. ನಿಯಮಗಳನ್ನು ಪಾಲಿಸದ ವ್ಯಕ್ತಿಯ ಯಜ್ಞೋಪವೀತ ಕೇವಲ ನೂಲಿನ ಎಳೆಯಾಗಿರುತ್ತದೆ.

ಬ್ರಹ್ಮಚಾರಿಗಳು ಒಂದು ಯಜ್ಞೋಪವೀತ, ಗೃಹಸ್ಥರು ಎರಡು ಯಜ್ಞೋಪವೀತಗಳನ್ನು ಧರಿಸ ಬೇಕೆಂದು ಶಾಸ್ತ್ರಗಳು ಹೇಳಿವೆ. ಗೃಹಸ್ಥರ ಒಂದು ಯಜ್ಞೋಪವೀತ ಅವರ ಜೀವನ ಸಂಗಾತಿಗೆ ಮುಡಿಪಾಗಿರುತ್ತದೆ.

ಒಂದು ಜನಿವಾರದಲ್ಲಿ ಮೂರು ಎಳೆಗಳಿರುತ್ತವೆ. ಮೊದಲನೇ ಎಳೆ ಬ್ರಹ್ಮ, ವಿಷ್ಣು, ಮಹೇಶ್ವರರೆಂಬ ತ್ರಿಮೂರ್ತಿಗಳ ಪ್ರತೀಕವಾಗಿದೆ. ಎರಡನೆಯ ಎಳೆ ದೇವ ಋಣ, ಪಿತೃ ಋಣ, ಋಷಿ ಋಣ ಮತ್ತು ಮೂರನೆಯ ಎಳೆ ಸತ್ವ ಗುಣ, ರಜೋ ಗುಣ, ತಮೋ ಗುಣಗಳ ಪ್ರತೀಕವಾಗಿದೆ. ಮೂರು ಪ್ರಮುಖ ಎಳೆಗಳಲ್ಲಿ ಒಂದೊಂದರಲ್ಲಿ ಪುನಃ ಮೂರು ಉಪ ಎಳೆಗಳಿರುತ್ತವೆ. ಹಾಗಾಗಿ ಯಜ್ಞೋಪವೀತದಲ್ಲಿರುವ ಒಟ್ಟು ಎಳೆಗಳು ಒಂಬತ್ತು. ಒಂದು ಮುಖ, ಎರಡು ಮೂಗಿನ ಹೊಳ್ಳೆಗಳು, ಎರಡು ಕಣ್ಣುಗಳು, ಎರಡು ಕಿವಿಗಳು, ಮಲ ಹಾಗೂ ಮೂತ್ರ ಹೀಗೆ ಒಂದು ಶರೀರ ನವ ದ್ವಾರಗಳಿಂದ ರಚನೆಯಾಗಿರುತ್ತದೆ. ಹಾಗೇಯೇ ಯಜ್ಞೋಪವೀತವೂ ಸಹ ಒಂಬತ್ತು ಎಳೆಗಳಿಂದ ಜೀವಾತ್ಮವನ್ನು ಪ್ರತಿನಿಧಿಸುತ್ತದೆ. ಬಾಯಿಯಿಂದ ಒಳ್ಳೆಯ ಮಾತು, ಒಳ್ಳೆಯ ಆಹಾರ ಸೇವಿಸಬೇಕು, ಕಣ್ಣಿನಿಂದ ಒಳ್ಳೆಯ ವಿಷಯ ನೋಡ ಬೇಕು, ಕಿವಿಯಿಂದ ಒಳ್ಳೆಯ ವಿಷಯ ಕೇಳ ಬೇಕೆಂಬ ತತ್ವವನ್ನೂ ಯಜ್ಞೋಪವೀತ ಸಾರುತ್ತದೆ.

ಯಜ್ಞೋಪವೀತದಲ್ಲಿರುವ ಬ್ರಹ್ಮಗಂಟು ಐದು ಗಂಟುಗಳಿಂದ ಕೂಡಿರುತ್ತದೆ. ಐದು ಗಂಟುಗಳು ಬ್ರಹ್ಮಜ್ಞಾನ, ಧರ್ಮ, ಅರ್ಥ, ಕಾಮ ಹಾಗೂ ಮೋಕ್ಷದ ಪ್ರತೀಕವಾಗಿವೆ. ಹಾಗೆಯೇ ಪಂಚ ಯಜ್ಞ, ಪಂಚ ಜ್ಞಾನೇಂದ್ರಿಯ, ಪಂಚ ಕರ್ಮಗಳನ್ನೂ ಪ್ರತಿನಿಧಿಸುತ್ತದೆ.

ಯಜ್ಞೋಪವೀತದ ಉದ್ದ ತೊಂಬತ್ತಾರು ಇಂಚುಗಳಷ್ಟಿರಬೇಕು. ಏಕೆಂದರೆ ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿಗೆ ಅರವತ್ತ ನಾಲ್ಕು ಕಲೆಗಳನ್ನು ಹಾಗೂ ಮೂವತ್ತೆರಡು ವಿದ್ಯೆಗಳನ್ನು ಕಲಿಯುವ ಹಂಬಲವಿರಬೇಕು. ಆತ ಆ ನಿಟ್ಟಿನಲ್ಲಿ ಪ್ರಯತ್ನಿಸ ಬೇಕು. ನಾಲ್ಕು ವೇದಗಳು, ನಾಲ್ಕು ಉಪವೇದಗಳು, ಆರು ಅಂಗಗಳು, ಆರು ದರ್ಶನಗಳು, ಮೂರು ಸೂತ್ರ ಗ್ರಂಥಗಳು, ಒಂಬತ್ತು ಅರಣ್ಯಕಗಳನ್ನು ಸೇರಿಸಿದರೆ ಮೂವತ್ತೆರಡು ವಿದ್ಯೆಗಳಾಗುತ್ತವೆ. ವಾಸ್ತು ನಿರ್ಮಾಣ, ಚಿತ್ರಕಲೆ, ಸಾಹಿತ್ಯ, ಯಂತ್ರ ನಿರ್ಮಾಣ, ಆಭರಣ ತಯಾರಿಕೆ, ಕೃಷಿ ಜ್ಞಾನ ಮುಂತಾದ ಅರವತ್ನಾಲ್ಕು ವಿದ್ಯೆಗಳನ್ನು ಕಲಿಯಲು ಯಜ್ಞೋಪವೀತಧಾರೀ ವ್ಯಕ್ತಿ ಪ್ರಯತ್ನಿಸಬೇಕೆಂದು ಶಾಸ್ತ್ರಗಳು ತಿಳಿಸುತ್ತವೆ.

ಯಜ್ಞೋಪವೀತ ಧಾರಣೆ ಗಾಯತ್ರಿ ಮಂತ್ರದಿಂದ ಆಗುತ್ತದೆ ಗಾಯತ್ರಿ ಮಂತ್ರ ಹಾಗೂ ಯಜ್ಞೋಪವೀತ ಸಮ್ಮಿಲನವೇ ದ್ವಿಜತ್ವ. ಯಜ್ಞೋಪವೀತದಲ್ಲಿ ಮೂರು ಎಳೆಗಳಿರುತ್ತವೆ. ಹಾಗೇ ಗಾಯತ್ರಿ ಮಂತ್ರದಲ್ಲೂ ಸಹ ಮೂರು ಚರಣಗಳಿವೆ. "ತತ್ಸವಿತುರ್ವರೇಣ್ಯಮ್” ಮೊದಲ ಚರಣ. "ಭರ್ಗೋ ದೇವಸ್ಯ ಧೀಮಹೀ” ಎರಡನೇ ಚರಣ". "ಧಿಯೋ ಯೋನಃ ಪ್ರಚೋದಯಾತ್” ಮೂರನೇ ಚರಣ.

*ಯಜ್ಞೋಪವೀತವನ್ನು ಧರಿಸುವಾಗ ಹೇಳುವ ಮಂತ್ರ*:-

ಯಜ್ಞೋಪವೀತಂ ಪರಮಂ ಪವಿತ್ರಂ ಪ್ರಜಾಪತೇರ್ಯತ್ಸಹಜಂ ಪುರಸ್ತಾತ್ |
ಆಯುಷ್ಯಮಗ್ರಂ ಪ್ರತಿಮುಂಚ ಶುಭ್ರಂ ಯಜ್ಞೋಪವೀತಂ ಬಲಮಸ್ತು ತೇಜಃ ||

ಅರ್ಥ: ಯಜ್ಞೋಪವೀತ ಪರಮ ಪವಿತ್ರವಾದದ್ದು, ಪ್ರಜಾಪತಿಗಿಂತಲೂ ಮೊದಲೇ ಉತ್ಪನ್ನಗೊಂಡಿದ್ದು, ಆಯುಷ್ಯವನ್ನು ಹೆಚ್ಚಿಸುವಂಥದ್ದು, ಮನುಷ್ಯನನ್ನು ಶುಭ್ರ ಮಾಡುವಂಥದ್ದು, ಯಜ್ಞೋಪವೀತ ನಮ್ಮ ಬಲ ಹಾಗೂ ತೇಜಸ್ಸನ್ನು ಹೆಚ್ಚಿಸುವಂಥದ್ದು. ಹಾಗಾಗಿ ಯಜ್ಞೋಪವೀತ ಧಾರಣೆಗೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಮಹತ್ವ ನೀಡಲಾಗಿದೆ.


*ಯಜ್ಞೋಪವೀತದ ನಿಯಮಗಳು*:-

* ಮಲ, ಮೂತ್ರ ವಿಸರ್ಜಿಸುವಾಗ ಜನಿವಾರವನ್ನು ಬಲಗಿವಿಯ ಮೇಲೆ ಹಾಕಿ ಕೊಳ್ಳ ಬೇಕು. ಕೈ, ಕಾಲುಗಳನ್ನು ತೊಳೆದು ಶುಚಿಯಾದ ಬಳಿಕವಷ್ಟೇ ಅದನ್ನು ಪುನಃ ಸರಿ ಮಾಡಿ ಕೊಳ್ಳಬೇಕು. ಏಕೆಂದರೆ ಯಜ್ಞೋಪವೀತ ಸೊಂಟದ ಭಾಗಕ್ಕಿಂತ ಮೇಲಿದ್ದರೆ ಅಶುಚಿ ಆಗುವುದಿಲ್ಲ.
* ಯಜ್ಞೋಪವೀತದ ಎಳೆ ತುಂಡಾದರೆ ತಕ್ಷಣ ಬದಲಿಸಬೇಕು. ತುಂಡಾಗಿರುವ ಜನಿವಾರ ಧರಿಸಿರಬಾರದು. ಯಜ್ಞೋಪವೀತ ಹಳೆಯದಾದರೆ ಆದಷ್ಟು ಬೇಗ ಬದಲಿಸಬೇಕು.
* ಜನ್ಮ ಹಾಗೂ ಮರಣ ಸೂತಕದ ಹನ್ನೊಂದು ದಿನಗಳ ನಂತರ ಯಜ್ಞೋಪವೀತವನ್ನು ಬದಲಿಸಬೇಕು.

* ಯಜ್ಞೋಪವೀತವನ್ನು ಶರೀರದಿಂದ ಹೊರಗೆ ತೆಗೆಯಬಾರದು. ಯಜ್ಞೋಪವೀತವನ್ನು ಸ್ವಚ್ಛ ಮಾಡ ಬೇಕೆಂದರೆ ಕತ್ತಿನಲ್ಲಿ ಧರಿಸಿ ತೊಳೆಯ ಬಹುದು.

*ಯಜ್ಞೋಪವೀತದ ವೈಜ್ಞಾನಿಕ ಮಹತ್ವ*:-

* ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿ ನಿಯಮಗಳಿಂದ ಬಂಧಿತನಾಗುತ್ತಾನೆ. ಅದು ವ್ಯಕ್ತಿಯನ್ನು ಸಾತ್ವಿಕ ಜೀವನದತ್ತ ಕೊಂಡೊಯ್ಯುತ್ತದೆ. ಸಾತ್ವಿಕ ಆಹಾರ ಹಾಗೂ ಸಾತ್ವಿಕ ಜೀವನವನ್ನು ನಡೆಸುವುದರಿಂದ ವ್ಯಕ್ತಿ ದೈಹಿಕ ಆರೋಗ್ಯವನ್ನು ಪಡೆದು ದೀರ್ಘಾಯುಷ್ಯ ಹೊಂದುತ್ತಾನೆ. ಮಲ, ಮೂತ್ರ ವಿಸರ್ಜನೆಯ ನಂತರ ತನ್ನ ಮುಖ, ಹಲ್ಲುಗಳನ್ನು ಸ್ವಚ್ಛ ಪಡಿಸಿ ಕೊಳ್ಳುವುದರಿಂದ ವಿಷಾಣುಗಳು ನಾಶಗೊಳ್ಳುತ್ತವೆ.

* ಬಲಗಿವಿಯ ಭಾಗದಲ್ಲಿರುವ ಒಂದು ವಿಶೇಷ ನರ ಉದರ ಭಾಗವನ್ನು
ಸಂಪರ್ಕಿಸುತ್ತದೆ. ಮಲ ಮೂತ್ರ ವಿಸರ್ಜನೆಯ ಸಮಯದಲ್ಲಿ ಜನಿವಾರವನ್ನು ಬಲಗಿವಿಯ ಮೇಲೆ ಹಾಕಿ ಕೊಂಡಾಗ ಆ ನರದ ಉತ್ತೇಜನವಾಗುತ್ತದೆ. ಇದರಿಂದ ಜೀರ್ಣ ಸಂಬಂಧಿ ಪ್ರಕ್ರಿಯೆಗಳು
ಸುಗಮವಾಗಿ ನಡೆಯುತ್ತವೆ. ಅಸಿಡಿಟಿ, ಉದರ ಸಂಬಂಧಿ ರೋಗಗಳು, ಮೂತ್ರೇಂದ್ರಿಯ ರೋಗಗಳು, ರಕ್ತದೊತ್ತಡ, ಹೃದಯ ಸಂಬಂಧಿ ರೋಗಗಳು ಹಾಗೂ ಹಲವು ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಸಿಗುತ್ತದೆ.

* ಚಿಕಿತ್ಸಾ ವಿಜ್ಞಾನದ ಪ್ರಕಾರ ಬಲಗಿವಿಯ ನರ ಗುಪ್ತೇಂದ್ರಿಯಗಳ ಜೊತೆ ಸಂಪರ್ಕವನ್ನು ಹೊಂದಿದೆ. ಮೂತ್ರ ವಿಸರ್ಜನೆಯ ಸಮಯದಲ್ಲಿ ಯಜ್ಞೋಪವೀತವನ್ನು ಬಲಗಿವಿಯ ಮೇಲೆ ಹಾಕಿ ಕೊಂಡಾಗ ಶುಕ್ರಾಣುಗಳ ರಕ್ಷಣೆಯಾಗುತ್ತದೆ.

* ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿಗೆ ಭಯ ಹಾಗೂ ದುಃಸ್ವಪ್ನಗಳ ಸಮಸ್ಯೆ ಕಾಡುವುದಿಲ್ಲ.

* ಯಜ್ಞೋಪವೀತವನ್ನು ಧರಿಸುವುದರಿಂದ ದೇಹದಲ್ಲಿರುವ ಸೂರ್ಯ ನಾಡಿ ಜಾಗೃತವಾಗಿರುತ್ತದೆ.

* ವ್ಯಕ್ತಿಯ ಎಡ ಬೆನ್ನಿನ ಭಾಗದಲ್ಲಿ ಹೊಟ್ಟೆಯ ಕಡೆ ಸಾಗುವ ಒಂದು ಪ್ರಾಕೃತಿಕ ರೇಖೆಯಿರುತ್ತದೆ. ಈ ರೇಖೆ ವಿದ್ಯುತ್ ಪ್ರವಾಹದಂತೆ ಕಾರ್ಯ ನಿರ್ವಹಿಸುತ್ತಿರುತ್ತದೆ. ಯಜ್ಞೋಪವೀತವನ್ನು ಧರಿಸುವುದರಿಂದ ಈ ರೇಖೆಯ ಶಕ್ತಿ ಕಡಿಮೆಯಾಗುತ್ತದೆ. ಆಗ ವ್ಯಕ್ತಿಯ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯಗಳೆಂಬ ಅರಿಷಡ್ವರ್ಗಗಳು ನಿಯಂತ್ರಣದಲ್ಲಿರುತ್ತವೆ.

* ಯಜ್ಞೋಪವೀತ ವ್ಯಕ್ತಿಯ ಅಂತ:ಪ್ರೇರಣೆ ಜಾಗೃತಗೊಳಿಸಿ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತದೆ. ವ್ಯಕ್ತಿಯನ್ನು ಭ್ರಷ್ಟಾಚಾರ ಅನ್ಯಾಯ, ಅನೀತಿಯಿಂದ ದೂರವಿರಿಸುತ್ತದೆ.

* ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಿಸುವಾಗ ಸಾಮಾನ್ಯವಾಗಿ ಬಲ ಕಿವಿ
ಹಿಂಡಲಾಗುತ್ತಿತ್ತು. ಇದಕ್ಕೆ ಕಾರಣ ಕಿವಿಗೂ ಹಾಗೂ ಮೆದುಳಿಗೂ ಇರುವ
ಸಂಪರ್ಕ. ಕಿವಿ ಎಳೆದಾಗ ವಿದ್ಯಾರ್ಥಿಯ ಮೆದುಳು ಜಾಗೃತವಾಗುತ್ತಿತ್ತು. ವಿದ್ಯಾರ್ಥಿಯ ಆಲಸ್ಯತನ ದೂರವಾಗುತ್ತಿತ್ತು. ಹಾಗೇ
ಯಜ್ಞೋಪವೀತವನ್ನೂ ಕಿವಿಯ ಮೇಲೆ ಹಾಕಿ ಕೊಂಡಾಗ ನಮ್ಮಲ್ಲಿರುವ ಆಲಸ್ಯತನ ದೂರಾಗಿ ಶರೀರ ಚಟುವಟಿಕೆಯಿಂದ ಕೂಡಿರುತ್ತದೆ.

ಹೀಗೆ ಯಜ್ಞೋಪವೀತ ಎಂಬುದು ಪರಮ ಪವಿತ್ರ ಹಾಗೂ ವೈಜ್ಞಾನಿಕ ಹಿನ್ನೆಲೆಯಿರುವ ಸಂಸ್ಕಾರ. ಯಜ್ಞೋಪವೀತ ಧಾರಣೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯ. ಇದರಿಂದ ವ್ಯಕ್ತಿಯ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಸಾಧ್ಯ.

ಎಂಥ ಅಂದ ಎಂಥ ಚಂದ ಶಾರದಮ್ಮ..🙏🚩🙏😇ಶಾರದಾ ಶಾರದಾಂಭೋಜ ವದನಾ ವದನಾಂಬುಜೇ |ಸರ್ವದಾ ಸರ್ವದಾಸ್ಮಕಂ ಸನ್ನಿಧಿ: ಸನ್ನಿಧಿಂ ಕ್ರಿಯಾತ್ ||
09/03/2025

ಎಂಥ ಅಂದ ಎಂಥ ಚಂದ ಶಾರದಮ್ಮ..🙏🚩🙏😇
ಶಾರದಾ ಶಾರದಾಂಭೋಜ ವದನಾ ವದನಾಂಬುಜೇ |
ಸರ್ವದಾ ಸರ್ವದಾಸ್ಮಕಂ ಸನ್ನಿಧಿ: ಸನ್ನಿಧಿಂ ಕ್ರಿಯಾತ್ ||

*ನಾಗರಪಂಚಮಿ*       ಅರ್ಜುನನ ಮಗ ಅಭಿಮನ್ಯು. ಅಭಿಮನ್ಯುವಿನ ಮಗ ಪರೀಕ್ಷಿತ. ಧರ್ಮರಾಯನ ಕಾಲಾನಂತರ ಭರತಖಂಡವನ್ನು ಆಳಿದವನು ಅವನೇ. ದ್ವಾಪರಾ ಯುಗದ...
25/07/2020

*ನಾಗರಪಂಚಮಿ*

ಅರ್ಜುನನ ಮಗ ಅಭಿಮನ್ಯು. ಅಭಿಮನ್ಯುವಿನ ಮಗ ಪರೀಕ್ಷಿತ. ಧರ್ಮರಾಯನ ಕಾಲಾನಂತರ ಭರತಖಂಡವನ್ನು ಆಳಿದವನು ಅವನೇ. ದ್ವಾಪರಾ ಯುಗದ ಅಂತ್ಯದಲ್ಲಿ ಪ್ರವೇಶಿಸಿದ ಕಲಿಪುರುಷನು ಪರೀಕ್ಷಿತನನ್ನು ಶನಿಯಂತೆ ಕಾಡುತ್ತಾನೆ. ಪರೀಕ್ಷಿತನನ್ನು ಮೃಗಬೇಟೆಗೆ ಪ್ರೇರೇಪಿಸುತ್ತಾನೆ. ಮೃಗಬೇಟೆಗೆಂದು ಕಾಡಿಗೆ ಹೋದ ಪರೀಕ್ಷಿತನಿಗೆ ಆಯಾಸವಾಗುತ್ತದೆ. ಸಮೀಪದಲ್ಲೇ ಇದ್ದ ಋಷಿಯ ಆಶ್ರಮವೊಂದನ್ನು ಪ್ರವೇಶಿಸುತ್ತಾನೆ. ಆಗ ಅಲ್ಲಿ ಧ್ಯಾನಸ್ಥನಾಗಿರುವ ಶಮೀಕ ಮುನಿಗಳ ಹೊರತಾಗಿ ಬೇರಾರೂ ಇದ್ದಿರುವುದಿಲ್ಲ. ಧ್ಯಾನಸ್ಥನಾದ ಮುನಿಗಳಲ್ಲಿ ಪರೀಕ್ಷಿತನು ನೀರು ಕೇಳುತ್ತಾನೆ. ತನ್ನಷ್ಟಕ್ಕೇ ತಾನು ಧ್ಯಾನದಲ್ಲಿ ಮಗ್ನನಾಗಿರುವ ಮುನಿಯು ಕುಳಿತಲ್ಲಿಂದ ಏಳದೇ ಇದ್ದಾಗ, ಕಲಿಯ ಪ್ರೇರಣೆಯಿಂದಾಗಿ ಅರಸನಿಗೆ ಮುನಿಯ ಮೇಲೆ ಕ್ರೋಧ ಉಕ್ಕೇರುತ್ತದೆ. ಕುಪಿತನಾದ ಪರೀಕ್ಷಿತನು ಸಮೀಪದಲ್ಲೇ ಇದ್ದ ಸತ್ತ ನಾಗರ ಹಾವೊಂದನ್ನು ಮುನಿಯ ಕೊರಳಿಗೆ ಸುತ್ತಿ ಅರಮನೆಗೆ ತೆರಳುತ್ತಾನೆ.
ಕುಶ ಸಮಿದೆಗಳನ್ನು ತರಲೆಂದು ಹೊರಗಡೆ ಹೋಗಿದ್ದ ಶಮೀಕ ಮುನಿಯ ಪುತ್ರ ಶೃಂಗಿ ಮುನಿಯು ಸ್ವಲ್ಪ ಸಮಯದ ನಂತರ ಆಶ್ರಮಕ್ಕೆ ಮರಳುತ್ತಾನೆ. ತಂದೆಯ ಕೊರಳಲ್ಲಿದ್ದ ಸತ್ತ ನಾಗರ ಹಾವನ್ನು ನೋಡಿ ಆತನಿಗೆ ವಿಪರೀತ ಕೋಪ ಬರುತ್ತದೆ. ಕುಪಿತನಾದ ಶೃಂಗಿಯು “ಯಾರು ಈ ಕೃತ್ಯವನ್ನು ಮಾಡಿದ್ದಾರೋ ಅವರು ಇನ್ನು ಏಳು ದಿನಗಳಲ್ಲಿ ತಕ್ಷಕನಿಂದ ಕಚ್ಚಲ್ಪಟ್ಟು ಮರಣ ಹೊಂದಲಿ” ಎಂದು ಶಪಿಸುತ್ತಾನೆ. ಸ್ವಲ್ಪ ಸಮಯದ ಬಳಿಕ ಧ್ಯಾನವನ್ನು ಮುಗಿಸಿ ಎಚ್ಚೆತ್ತ ಶಮೀಕ ಮುನಿಯು ತನ್ನ ಮಗನು ಧರ್ಮಿಷ್ಠನಾದ ಭರತಖಂಡದ ಚಕ್ರವರ್ತಿಯನ್ನು ಶಪಿಸಿದ್ದನ್ನು ತಿಳಿದು ಪಶ್ಚಾತ್ತಾಪ ಪಡುತ್ತಾನೆ. ತನ್ನ ಶಿಷ್ಯಂದಿರಲ್ಲಿಯೇ ಓರ್ವನನ್ನು ಪರೀಕ್ಷಿತನಲ್ಲಿಗೆ ಕಳುಹಿಸಿ ಆತನಿಗೆ ತನ್ನ ಮಗನ ಶಾಪದ ವೃತ್ತಾಂತವನ್ನು ತಿಳಿಸಿ , ಸೂಕ್ತ ಪರಿಹಾರಗಳನ್ನು ಮಾಡಿಕೊಳ್ಳುವಂತೆ ಸಲಹೆಗಳನ್ನು ನೀಡುತ್ತಾನೆ.
ಮುನಿಯ ಶಾಪದ ವಿಚಾರವನ್ನು ತಿಳಿದು ಪರೀಕ್ಷಿತನಿಗೆ ಅಪಾರ ದುಃಖವಾಗುತ್ತದೆ. ಸಿಟ್ಟಿನ ಭರದಲ್ಲಿ ತಾನು ಶಮೀಕ ಮುನಿಗಳಿಗೆ ಮಾಡಿದ ಅಪಚಾರದ ವಿಷಯವನ್ನು ನೆನಪಿಸಿಕೊಂಡು ವ್ಯಥೆ ಪಡುತ್ತಾನೆ. ತಾನು ಮಾಡಿದ ಅಂತಹ ಘೋರವಾದ ತಪ್ಪಿಗೆ ಶೃಂಗಿ ಮುನಿಯು ಶಪಿಸಿದ್ದು ಸರಿಯಾಗಿಯೇ ಇದೆ. ತಪ್ಪು ಮಾಡಿದ ತಾನು ಶಿಕ್ಷೆಯನ್ನು ಅನುಭವಿಸುತ್ತೇನೆ, ತಕ್ಷಕ ಬರಲಿ, ತನ್ನನ್ನು ಕಚ್ಚಿ ಸಾಯಿಸಲಿ ಎಂದುಕೊಂಡು ಸಾಯಲು ಸಿದ್ಧನಾಗುತ್ತಾನೆ. ಆದರೆ ಅರಸನ ಮಂತ್ರಿಗಳು , ಕುಲಪುರೋಹಿತರು , ಪರಿವಾರದವರೆಲ್ಲ ಸೇರಿ ಪರೀಕ್ಷಿತನನ್ನು ತಕ್ಷಕನಿಂದ ರಕ್ಷಿಸಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಅರಸನನ್ನು ಒಂದು ರಕ್ಷಿತ ಗೃಹದಲ್ಲಿ ಇರಿಸಿ ಒಂದು ಹುಳುವೂ ಕೂಡಾ ಒಳಗೆ ಪ್ರವೇಶಿಸದಂತೆ ಭದ್ರವಾದ ಕಾವಲನ್ನು ಇರಿಸುತ್ತಾರೆ.
ಆದರೆ ಇಂತಹ ಯಾವುದೇ ಭದ್ರತೆಯು ಮುನಿಯ ಶಾಪದಿಂದ ಉಂಟಾಗಬಹುದಾದ ತನ್ನ ಮರಣವನ್ನು ತಪ್ಪಿಸಲಾರದು, ತನ್ನ ಮರಣವು ನಿಶ್ಚಿತ ಎಂಬುದನ್ನು ಅರಿತಿದ್ದ ಪ್ರಾಜ್ಞನಾದ ಪರೀಕ್ಷಿತನು ತನ್ನ ಜೀವನದ ಕೊನೆಯ ಆ ಏಳು ದಿನಗಳನ್ನು ಪುಣ್ಯ ಕಥಾ ಶ್ರವಣ ಮಾಡುತ್ತಾ ಸಂತೋಷದಿಂದ ಕಳೆಯಲು ಬಯಸುತ್ತಾನೆ. ಅವನ ಇಚ್ಛೆಯಂತೆ ಶುಕ ಮುನಿಗಳು ಆತನಿಗೆ ಭಾಗವತ ಪುರಾಣಗಳ ಕಥೆಗಳನ್ನು ಹೇಳುತ್ತಾರೆ. ಅರಸನು ತನ್ನ ರಾಣಿ ಇರಾವತಿಯೊಡಗೂಡಿ ದೇವರ ಭಜನೆಯಲ್ಲಿಯೇ ಆ ಏಳು ದಿನಗಳನ್ನು ಕಳೆಯುತ್ತಾನೆ.
ಶೃಂಗಿ ಮುನಿಯ ಶಾಪದಿಂದ ತಕ್ಷಕನು ಪೇಚಿಗೆ ಸಿಲುಕುತ್ತಾನೆ. ತನಗೂ ಪರೀಕ್ಷಿತನಿಗೂ ನೇರವಾಗಿ ಯಾವುದೇ ದ್ವೇಷ ಇಲ್ಲದಿದ್ದರೂ ವಿನಾಕಾರಣ ಧರ್ಮಿಷ್ಠನಾದ ಆ ಚಕ್ರವರ್ತಿ ಪರೀಕ್ಷಿತನನ್ನು ಕಚ್ಚಿ ಕೊಲ್ಲಬೇಕು. ಇಲ್ಲದಿದ್ದಲ್ಲಿ ಶೃಂಗಿ ಮುನಿಯ ಶಾಪ ಹುಸಿಯಾಗಿ ಆತನ ಕೋಪಕ್ಕೆ ತಾನು ಕಾರಣನಾಗಬೇಕಾಗುತ್ತದೆ ಎಂದು ಚಿಂತಿಸುತ್ತಾನೆ. ಏನು ಮಾಡಲಿ ಎಂಬುದಾಗಿ ಚಿಂತಿಸುತ್ತಾನೆ. ಆಗ ಅವನಿಗೆ ಈ ಹಿಂದೆ ಅರ್ಜುನನು ಖಾಂಡವ ವನವನ್ನು ದಹಿಸುವ ಸಂದರ್ಭದಲ್ಲಿ ಅನೇಕ ನಾಗಗಳ ಜೊತೆಯಲ್ಲಿ ತನ್ನ ಹೆಂಡತಿಯನ್ನು ಕೂಡಾ ಕೊಂದು ತನ್ನ ಮಗ ಅಶ್ವಸೇನನನ್ನು ಅರೆಗಡಿದುದು ನೆನಪಾಗುತ್ತದೆ. ಆ ದ್ವೇಷವನ್ನೇ ನೆಪವಾಗಿ ಇಟ್ಟುಕೊಂಡು ತಾನು ಇಂದು ಆ ಅರ್ಜುನನ ಮೊಮ್ಮಗನಾದ ಈ ಪರೀಕ್ಷಿತನನ್ನು ಕಚ್ಚಿ ಕೊಲ್ಲುತ್ತೇನೆ ಎಂಬುದಾಗಿ ಹೊರಡುತ್ತಾನೆ.
ಆದರೆ ಪರೀಕ್ಷಿತನು ಇರುವ ಆ ರಕ್ಷಿತ ಗೃಹಕ್ಕೆ ಬಿಗಿಯಾದ ಭದ್ರತೆ ಇದೆ. ತನಗೆ ಒಳಗಡೆ ಪ್ರವೇಶಿಸಲು ಸಾಧ್ಯವೇ ಇಲ್ಲ ಎಂಬುದು ತಕ್ಷಕನಿಗೆ ಅರಿವಾಗುತ್ತದೆ. ಅಷ್ಟರಲ್ಲಿ ಪರಿಚಾರಕರು ಅರಸನಿಗೆ ಹಣ್ಣುಗಳನ್ನು ಕೊಂಡೊಯ್ದು ಕೊಡುತ್ತಿರುವುದು ಆತನ ಗಮನಕ್ಕೆ ಬರುತ್ತದೆ. ತಕ್ಷಣ ಆತನು ಒಂದು ಉಪಾಯವನ್ನು ಮಾಡುತ್ತಾನೆ. ತಾನು ಒಂದು ಚಿಕ್ಕ ಹುಳುವಿನ ರೂಪ ಧರಿಸಿ ಆ ಹಣ್ಣಿನೊಳಗೆ ಸೇರಿಕೊಳ್ಳುತ್ತಾನೆ. ಅರಸನು ಆ ಹಣ್ಣನ್ನು ಕತ್ತರಿಸಿದಾಗ ಅದರಲ್ಲಿ ಹುಳ ಇರುವುದನ್ನು ನೋಡುತ್ತಾನೆ. ಪ್ರಾಜ್ಞನಾದ ಪರೀಕ್ಷಿತನಿಗೆ ಆ ಹುಳವೇ ತಕ್ಷಕ ಎಂಬುದು ವಿಧಿತವಾಗುತ್ತದೆ. ಹುಳದ ರೂಪದಲ್ಲಿದ್ದ ತಕ್ಷಕನು ಬೆಳೆ ಬೆಳೆದು ದೊಡ್ಡದಾಗಿ ನಿಜರೂಪ ಧರಿಸಿ ಪರೀಕ್ಷಿತನನ್ನು ಕಚ್ಚಿ ಕೊಲ್ಲುತ್ತಾನೆ.
ಸಾಯುವ ಸಂದರ್ಭದಲ್ಲಿ ಅರಸನು ದುಃಖಿಸುತ್ತಿರುವ ತನ್ನ ರಾಣಿಯಾದ ಇರಾವತಿಯನ್ನು ಕರೆದು “ನನ್ನೊಡನೆ ನೀನೂ ಕೂಡಾ ಸಹಗಮನ ಮಾಡಿಕೊಳ್ಳಬೇಡ , ನೀನು ಕ್ಷತ್ರಿಯಾಣಿಯಾಗಿ ನಿನ್ನ ಕರ್ತವ್ಯವನ್ನು ಮಾಡು , ಮಗನಾದ ಜನಮೇಜಯನು ಇನ್ನೂ ತುಂಬಾ ಚಿಕ್ಕವನು , ಏನೂ ಅರಿಯದವನು , ಆತನನ್ನು ಬೆಳೆಸಿ ದೊಡ್ಡವನನ್ನಾಗಿ ಮಾಡು , ನಂತರ ಅವನಿಗೆ ಪಟ್ಟವನ್ನು ಕಟ್ಟು , ನನ್ನ ಮರಣದ ಗುಟ್ಟನ್ನು ಅವನಿಗೆ ತಿಳಿಸಬೇಡ , ಸರ್ಪ ದಂಶನದಿಂದ ನಾನು ತೀರಿಕೊಂಡೆ ಎಂಬ ಸತ್ಯವನ್ನು ಯಾವುದೇ ಕಾರಣಕ್ಕೂ ಆತನಿಗೆ ತಿಳಿಸಬೇಡ , ತಿಳಿದರೆ ಸಹಜವಾಗಿಯೇ ಅವನಲ್ಲಿಯೂ ನಾಗಕುಲದ ಮೇಲೆ ವೈರತ್ವ ಬೆಳೆಯುತ್ತದೆ , ನಾಗದ್ವೇಷ ಒಳ್ಳೆಯದಲ್ಲ” ಎಂದು ಹೇಳಿ ಆತ ಪ್ರಾಣ ಬಿಡುತ್ತಾನೆ.

ಪರೀಕ್ಷಿತನ ಮರಣಾ ನಂತರ ಆತನ ಮಗ ಜನಮೇಜಯನು ಪಟ್ಟವೇರುತ್ತಾನೆ. ಜನಮೇಜಯನು ಭರತ ಖಂಡವನ್ನು ಆಳಿದ ದ್ವಾಪರಾ ಯುಗದ ಕೊನೆಯ ಚಕ್ರವರ್ತಿಯಾಗಿದ್ದಾನೆ. ದ್ವಾಪರಾ ಯುಗವು ಮುಗಿದು ಕಲಿಯುಗವು ಪ್ರಾರಂಭವಾಗುವ ಆ ಯುಗಸಂಧಿ ಕಾಲದಲ್ಲಿ ಆಳಿಕೊಂಡಿದ್ದವನು ಜನಮೇಜಯ. ಹೀಗಾಗಿ ಕಲಿಯುಗದ ಪ್ರಥಮ ಚಕ್ರವರ್ತಿಯೂ ಅವನೇ ಆಗಿದ್ದಾನೆ. ಒಂದು ರೀತಿಯಲ್ಲಿ ಆತನೊಬ್ಬ ಯುಗ ಪ್ರವರ್ತಕ. ಚಿಕ್ಕಂದಿನಲ್ಲಿಯೇ ಚಕ್ರವರ್ತಿ ಪಟ್ಟವನ್ನು ಸ್ವೀಕರಿಸಿ ಹಲವು ವರ್ಷಗಳವರೆಗೆ ಭರತ ಖಂಡವನ್ನು ಆಳಿ ಬೆಳೆದು ದೊಡ್ಡವನಾಗಿದ್ದರೂ ಆತನಿಗೆ ತನ್ನ ತಂದೆಯ ಸಾವಿನ ರಹಸ್ಯವು ತಿಳಿದಿರಲಿಲ್ಲ. ಏಕೆಂದರೆ ಆತನ ತಾಯಿ ಇರಾವತಿಯಾಗಲೀ , ಮಂತ್ರಿಗಳಾಗಲೀ , ಕುಲಪುರೋಹಿತರಾಗಲೀ ಯಾರೂ ಕೂಡಾ ಆತನಿಗೆ ಆ ವಿಷಯವನ್ನು ತಿಳಿಸಿರಲಿಲ್ಲ.

ಹೀಗಿರುವಾಗ ವೇದ ಮುನಿಗಳ ಆಶ್ರಮದಲ್ಲಿ ಆತನ ಶಿಷ್ಯನಾದ ಉತ್ತಂಕ ಎಂಬ ವಟುವೊಬ್ಬನು ವಿದ್ಯಾಭ್ಯಾಸವನ್ನು ಮೂರೈಸಿದ ಬಳಿಕ ತನ್ನ ಗುರುಗಳಿಗೆ ಗುರುಕಾಣಿಕೆಯನ್ನು ಕೊಡಬೇಕೆಂದು ತೀರ್ಮಾನಿಸಿದನು. ಆದರೆ ವೇದ ಮುನಿಗಳು ಶಿಷ್ಯರಿಂದ ಕಾಣಿಕೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಆದರೂ ಉತ್ತಂಕನು ಬಂದು ಗುರುಗಳಿಗೆ ವಂದಿಸಿ “ಗುರುಗಳೇ ನಿಮ್ಮ ದಯೆಯಿಂದಲೇ ನಾನು ವಿದ್ಯೆಯನ್ನು ಕಲಿತೆ , ನಾನು ನಿಮಗೆ ಗುರುದಕ್ಷಿಣೆಯನ್ನು ಕೊಡಲು ಬಯಸಿದ್ದೇನೆ , ನಿಮಗೆ ಏನು ಬೇಕೆಂಬುದನ್ನು ಹೇಳಿ , ತಂದು ಕೊಡುವೆ , ಅದನ್ನು ದಯವಿಟ್ಟು ಸ್ವೀಕರಿಸಬೇಕು” ಎನ್ನುತ್ತಾನೆ. ಆಗ ವೇದಮುನಿಗಳು “ನೀನು ಉತ್ತಮ ಪ್ರಜೆಯಾದರೆ ಅದೇ ನನಗೆ ಗುರುಕಾಣಿಕೆ , ನಾನು ಕಾಣಿಕೆಗಳನ್ನು ಸ್ವೀಕರಿಸುವುದಿಲ್ಲ , ಬೇಕಿದ್ದರೆ ನೀನು ಗುರುಪತ್ನಿಯನ್ನು ಕೇಳಿ ನೋಡು” ಎಂದು ಉತ್ತಂಕನನ್ನು ತನ್ನ ಹೆಂಡತಿಯೆಡೆಗೆ ಕಳುಹಿಸುತ್ತಾನೆ.

ಉತ್ತಂಕನು ಗುರುಪತ್ನಿ ಇದ್ದೆಡೆಗೆ ಹೋಗಿ ವಂದಿಸಿ “ತಾಯಿ ನನ್ನ ವಿದ್ಯಾಭ್ಯಾಸ ಮುಗಿದಿದೆ , ನೀವು ನನ್ನನ್ನು ಮಗನಂತೆ ಸಾಕಿ ಸಲಹಿದ್ದೀರಿ , ನಾನು ಗುರುಕಾಣಿಕೆಯನ್ನು ಕೊಡಲು ಬಯಸಿದ್ದೇನೆ , ನಿಮಗೆ ಏನು ಬೇಕು ಹೇಳಿ” ಎನ್ನುತ್ತಾನೆ. ಆಗ ಆಕೆಯು “ನಾನು ಪೂಜೆಗೆಂದು ಸುಮಂಗಲಿಯರನ್ನು ಆಹ್ವಾನಿಸಿದ್ದೇನೆ , ಅವರೆಲ್ಲ ಬರುವಾಗ ನಾನು ಬರಿ ಕಿವಿಯಲ್ಲಿ ಇರುವುದು ಸರಿಯಲ್ಲ , ಹೀಗಾಗಿ ಆ ಒಂದು ದಿನದ ಮಟ್ಟಿಗೆ ಪೌಷ್ಯ ರಾಜನ ಹೆಂಡತಿಯ ಕಿವಿಯ ಓಲೆಗಳನ್ನು ತಂದು ಕೊಡುವೆಯಾ” ಎಂದು ಕೇಳುತ್ತಾಳೆ. ಉತ್ತಂಕನು ಆದೀತು ಎಂದು ಹೇಳಿ ಅವಳಿಗೆ ವಂದಿಸಿ ಪೌಷ್ಯ ರಾಣಿಯಲ್ಲಿಗೆ ಹೋಗುತ್ತಾನೆ. ರಾಣಿಯು ಬಂದಿರುವ ವಟುವಿಗೆ ವಂದಿಸಿ ಉಪಚರಿಸಿ ಬಂದಿರುವ ಕಾರಣವನ್ನು ಕೇಳುತ್ತಾಳೆ. ಉತ್ತಂಕನು ವಿಷಯವನ್ನು ತಿಳಿಸಿದಾಗ , ರಾಣಿಗೆ ತುಂಬಾ ಸಂತೋಷವಾಗುತ್ತದೆ. “ಋಷಿ ಪತ್ನಿಯೋರ್ವಳು ನನ್ನ ಆಭರಣಗಳನ್ನು ಬಯಸಿದ್ದಾಳೆ ಎಂದರೆ ಅದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ , ಕೇವಲ ಒಂದು ದಿನದ ಮಟ್ಟಿಗಲ್ಲ ಶಾಶ್ವತವಾಗಿ ಅವುಗಳನ್ನು ಆ ಮುನಿ ಪತ್ನಿಗೆ ನೀಡುತ್ತೇನೆ , ಆದರೆ ಕೊಂಡು ಹೋಗುವಾಗ ಜಾಗ್ರತೆ , ಇವು ಮೂರು ಲೋಕಗಳಲ್ಲಿಯೂ ಪ್ರಸಿದ್ಧವಾದ ಆಭರಣಗಳಾಗಿವೆ , ಈ ಹಿಂದೆ ತಕ್ಷಕನು ಅವುಗಳನ್ನು ಅಪರಿಸಲು ಪ್ರಯತ್ನಿಸಿದ್ದಾನೆ , ಹೀಗಾಗಿ ವಿಶೇಷವಾಗಿ ಎಚ್ಚರವಹಿಸಿ” ಎಂದು ಹೇಳಿ ಉತ್ತಂಕನಿಗೆ ನವರತ್ನ ಖಚಿತವಾದ ಆ ಆಭರಣಗಳನ್ನು ನೀಡುತ್ತಾಳೆ.

ಉತ್ತಂಕನು ಆಭರಣಗಳನ್ನು ಗಂಟು ಕಟ್ಟಿಕೊಂಡು ಬರುವಾಗ ಪೌಷ್ಯ ರಾಣಿಯು ಹೇಳಿದಂತೆಯೇ ದಾರಿಯಲ್ಲಿ ತಕ್ಷಕನು ಅವನನ್ನು ಅಡ್ಡಯಿಸುತ್ತಾನೆ. ಫಣಿಗಳಿಗೆ ಮಣಿ ರತ್ನಗಳ ಮೇಲೆ ವ್ಯಾಮೋಹ ಜಾಸ್ತಿ ತಾನೇ ? ಹೀಗಾಗಿ ಅವನು ಉತ್ತಂಕನನ್ನು ವಂಚಿಸಿ ಅವನ ಬಳಿಯಿದ್ದ ಆಭರಣಗಳನ್ನು ಬಲಾತ್ಕಾರವಾಗಿ ಕೊಂಡೊಯ್ದು ಪಾತಾಳದಲ್ಲಿ ಬಚ್ಚಿಡುತ್ತಾನೆ. ಅಸಹಾಯಕನಾದ ಉತ್ತಂಕನು ಅಳುತ್ತಾನೆ , ಹೇಗಾದರೂ ಮಾಡಿ ತಕ್ಷಕನ ಮೇಲೆ ಸೇಡು ತೀರಿಸಿಕೊಳ್ಳಬೇಕು ಎಂದುಕೊಂಡು ನೇರವಾಗಿ ಹಸ್ತಿನಾವತಿಗೆ ಹೋಗುತ್ತಾನೆ. ಅಲ್ಲಿ ಅರಸನಾದ ಜನಮೇಜಯನನ್ನು ಗುಪ್ತವಾಗಿ ಭೇಟಿಮಾಡಿ ಆತನಿಗೆ ಆತನ ತಂದೆ ಪರೀಕ್ಷಿತನ ಮರಣ ರಹಸ್ಯವನ್ನು ತಿಳಿಸುತ್ತಾನೆ. ತನ್ನ ತಂದೆಯ ಮರಣಕ್ಕೆ ತಕ್ಷಕನೇ ಕಾರಣ ಎಂಬ ವಿಷಯವನ್ನು ತಿಳಿದ ಜನಮೇಜಯನು ಸಿಟ್ಟಿನಿಂದ ಹಾರಾಡುತ್ತಾನೆ. ಆಗ ಉತ್ತಂಕನು “ತಕ್ಷಕನ ಮೇಲೆ ಸೇಡು ತೀರಿಸಿಕೊಳ್ಳುವ ಇಚ್ಛೆ ನಿನಗಿದ್ದರೆ ಈ ಕೂಡಲೇ ಸರ್ಪಯಾಗವನ್ನು ಮಾಡು , ನಾಗಕುಲವನ್ನೇ ನಾಶ ಮಾಡು” ಎಂದು ಹೇಳಿ ಆತನಲ್ಲಿ ನಾಗದ್ವೇಷದ ಬೀಜವನ್ನು ಬಿತ್ತಿ ಹೊರಟುಹೋಗುತ್ತಾನೆ.

ತಾಯಿಯಾಗಲೀ , ಮಂತ್ರಿಗಳಾಗಲೀ , ಕುಲಪುರೋಹಿತರಾಗಲೀ ಎಷ್ಟೇ ಹೇಳಿದರೂ ಕೇಳದ ಜನಮೇಜಯನು ತಕ್ಷಕನ ಮೇಲೆ ಕುಪಿತನಾಗಿ ಸಂಪೂರ್ಣ ನಾಗಕುಲವನ್ನೇ ನಾಶಪಡಿಸುತ್ತೇನೆ ಎಂಬುದಾಗಿ ಸರ್ಪಯಾಗವನ್ನು ಮಾಡಲು ಸಂಕಲ್ಪಿಸುತ್ತಾನೆ. ಜಗತ್ತಿನಲ್ಲಿ ಈ ಹಿಂದೆ ಯಾರೂ ಮಾಡದೇ ಇದ್ದ , ಮುಂದೆ ಕೂಡಾ ಯಾರೂ ಮಾಡದಂತಹ ಸರ್ಪಯಾಗವನ್ನು ಮಾಡಲು ಉದ್ಯುಕ್ತನಾಗುತ್ತಾನೆ. ಅದಕ್ಕಾಗಿ ಬೃಹತ್ ಯಾಗ ಶಾಲೆಯನ್ನು ನಿರ್ಮಿಸಿ , ಋಷಿ ಮುನಿಗಳನ್ನು ಬ್ರಾಹ್ಮಣರನ್ನೆಲ್ಲ ಆಮಂತ್ರಿಸಿ , ಬೇಡಿದ ವಿಪ್ರರಿಗೆ ಅವರಿಗೆ ಬೇಕಾದುದನ್ನು ದಾನ ಮಾಡುತ್ತಾ ವಿಜೃಂಭಣೆಯಿಂದ ಯಾಗವನ್ನು ನಡೆಸುತ್ತಾನೆ. ಅಧ್ವರ್ಯುವಾಗಿ ತಾನೇ ಕುಳಿತುಕೊಳ್ಳುತ್ತಾನೆ. ಪುರೋಹಿತರು ಮಂತ್ರೋಚ್ಛಾರಣೆ ಮಾಡಿ ಆಹ್ವಾನಿಸಿದಂತೆ ಮಂತ್ರದ ವಶೀಕರಣಕ್ಕೆ ಸಿಲುಕಿದ ನಾಗಗಳು ಒಂದೊಂದಾಗಿ ಬಂದು ಯಜ್ಞಕುಂಡಕ್ಕೆ ಬಿದ್ದು ಆಹುತಿಯಾಗತೊಡಗುತ್ತವೆ.

ಹಲವು ನಾಗ ಸಂತತಿಗಳು ಅಳಿದು ಹೋಗುತ್ತವೆ. ಎಲ್ಲಾ ನಾಗಗಳು ಸುಟ್ಟು ಹೋದರೂ ತಕ್ಷಕನ ಸುಳಿವೇ ಇರಲಿಲ್ಲ. ಆತನನ್ನು ಸ್ವರ್ಗದಲ್ಲಿ ದೇವೇಂದ್ರನು ರಕ್ಷಿಸಿ ಹಿಡಿದಿಟ್ಟುಕೊಂಡಿದ್ದ. ಇದನ್ನು ಅರಿತ ಪುರೋಹಿತರು “ದೇವೇಂದ್ರ ಸಹಿತನಾಗಿ ತಕ್ಷಕನು ಬರಲಿ” ಎಂಬುದಾಗಿ ಮಂತ್ರ ಉಚ್ಛರಿಸುತ್ತಾರೆ. ಹೆದರಿದ ದೇವೇಂದ್ರ ತಾನು ತಪ್ಪಿಸಿಕೊಳ್ಳುತ್ತಾನೆ. ಇನ್ನೇನು ತಕ್ಷಕ ಬಂದು ಬೆಂಕಿಯಲ್ಲಿ ಬೀಳುತ್ತಾನೆ ಎಂಬಾಗ , ಆಸ್ತೀಕನೆಂಬ ವಟುವು ಬಂದು ತಡೆಯುತ್ತಾನೆ. ಜನಮೇಜಯನಿಗೆ ಕೋಪ ಬರುತ್ತದೆ. “ಎಲೈ ವಟುವೇ , ನಿನಗೇನು ಬೇಕೋ ಕೇಳು , ಕೊಡುವೆ , ಯಾಗವನ್ನು ನಿಲ್ಲಿಸಬೇಡ” ಎನ್ನುತ್ತಾನೆ. ಆಗ ಆಸ್ತೀಕನು ಜನಮೇಜಯನನ್ನು ಸಂತೈಸಿ , ಆತನ ತಂದೆಯ ಮರಣದ ನಿಜ ವೃತ್ತಾಂತವನ್ನು ತಿಳಿಸುತ್ತಾನೆ. “ತಕ್ಷಕನದ್ದೇನೂ ತಪ್ಪಿರಲಿಲ್ಲ , ಅವನು ಕಚ್ಚುವುದಕ್ಕೆ ಮುನಿಯ ಶಾಪವೇ ಕಾರಣ. ಹಾಗಂತ ಮುನಿಯದ್ದೂ ತಪ್ಪಿರಲಿಲ್ಲ. ಅವನು ಶಪಿಸಲು ನಿನ್ನ ತಂದೆ ಆತನ ತಂದೆಗೆ ಮಾಡಿದ ಅಪಚಾರವೇ ಕಾರಣ. ಮತ್ತೆ ನಿನ್ನ ತಂದೆಯದ್ದೂ ತಪ್ಪಿರಲಿಲ್ಲ. ಆತ ಹಾಗೆ ತಪ್ಪಿ ನಡೆಯಲು ಕಲಿಯ ಪ್ರೇರಣೆಯೇ ಕಾರಣ. ಇದೆಲ್ಲವೂ ಕಲಿ ಕಾಲದ ಮಹಿಮೆ. ಆದ್ದರಿಂದ ನೀನು ಯಜ್ಞವನ್ನು ನಿಲ್ಲಿಸು. ಸುಮ್ಮನೇ ನಾಗ ಶಾಪಕ್ಕೆ ಒಳಗಾಗಬೇಡ” ಎನ್ನುತ್ತಾನೆ.

ಅಂತೆಯೇ ಜನಮೇಜಯನು ಸರ್ಪಯಾಗವನ್ನು ನಿಲ್ಲಿಸುತ್ತಾನೆ. ಸರ್ಪಗಳಲ್ಲಿ ತಕ್ಷಕನ ಕುಲವೊಂದು ಉಳಿಯುತ್ತದೆ. ಸರ್ಪಯಾಗವನ್ನು ನಿಲ್ಲಿಸಿದ ತರುವಾಯ ಜನಮೇಜಯನು ತಕ್ಷಕನ ಕ್ಷಮೆ ಯಾಚಿಸುತ್ತಾನೆ. ತಕ್ಷಕನು ಆತನನ್ನು ಕ್ಷಮಿಸಿದರೂ ಅಷ್ಟರಲ್ಲಾಗಲೇ ಹಲವು ನಾಗ ಕುಲಗಳು ದಹಿಸಿ ಹೋಗಿದ್ದರಿಂದ ಜನಮೇಜಯನಿಗೆ ನಾಗದೋಷ ಬರುತ್ತದೆ. ಪರಿಣಾಮವಾಗಿ ಆತನನ್ನು ಕುಷ್ಟರೋಗವು ಬಾಧಿಸುತ್ತದೆ. ಮುಂದೆ ಗುರುವಾಯೂರು ಕ್ಷೇತ್ರದಲ್ಲಿ ಹರಿದರ್ಶನವಾದೊಡನೆ ಆತನ ದೋಷಗಳೆಲ್ಲವೂ ಪರಿಹಾರವಾಗುತ್ತವೆ. ಮುಂದೆ ಹಲವು ಕಾಲಗಳವರೆಗೆ ಜನಮೇಜಯನು ಈ ಕಲಿಯುಗದಲ್ಲಿಯೂ ಚಕ್ರವರ್ತಿಯಾಗಿ ಮೆರೆಯುತ್ತಾನೆ. ಆಸ್ತೀಕನು ತನ್ನನ್ನು ಹಾಗೂ ತನ್ನ ಕುಲದವರನ್ನು ಉಳಿಸಿದ್ದರಿಂದಾಗಿ ಹರುಷಗೊಂಡು “ಯಾರು ಆಸ್ತೀಕ, ಆಸ್ತೀಕ, ಆಸ್ತೀಕ ಎಂಬುದಾಗಿ ಮೂರು ಬಾರಿ ಉಚ್ಛರಿಸುತ್ತಾರೋ ಅವರಿಗೆ ನಾಗದೋಷ ತಟ್ಟದೇ ಇರಲಿ” ಎಂಬ ವರವೊಂದನ್ನು ತಕ್ಷಕನು ಕರುಣಿಸುತ್ತಾನೆ.

ಹೀಗೆ ಜನಮೇಜಯನು ಸರ್ಪಯಾಗವನ್ನು ನಿಲ್ಲಿಸಿದ ದಿನವೇ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ. ಅದನ್ನೇ ನಾವು ನಾಗರ ಪಂಚಮಿ ಎಂಬುದಾಗಿ ಆಚರಿಸುತ್ತೇವೆ. ಅಷ್ಟಕುಲ ನಾಗಗಳಾದ ಅನಂತ(ಶೇಷ) , ವಾಸುಕಿ , ಪದ್ಮ , ಮಹಾಪದ್ಮ , ತಕ್ಷಕ , ಕುಲೀಕ , ಕಾರ್ಕೋಟಕ ಮತ್ತು ಶಂಖಪಾಲ ಇವುಗಳನ್ನು ನಾವು ಆ ದಿನ ಪೂಜಿಸುತ್ತೇವೆ. ಅರಶಿನ , ಕುಂಕುಮ , ಅಕ್ಕಿ ಮತ್ತು ಹೂವನ್ನು ನಾಗದೇವರಿಗೆ ಅರ್ಪಿಸುತ್ತೇವೆ. ಹಸಿಹಾಲು , ತುಪ್ಪ , ಸಕ್ಕರೆಯನ್ನು ನಾಗದೇವರ ಮೂರ್ತಿಗೆ ಅರ್ಪಿಸುತ್ತೇವೆ. ಪೂಜೆ ಪೂರ್ಣಗೊಂಡ ಬಳಿಕ ನಾಗದೇವರಿಗೆ ಆರತಿ ಬೆಳಗುತ್ತೇವೆ. ಹಾವಾಡಿಗರಿಗೆ ದಾನ ಮಾಡುವ ಕ್ರಮವೂ ಕೆಲವು ಕಡೆ ಇದೆ. ಪೂಜೆಯ ಅಂತ್ಯದಲ್ಲಿ ನಾಗ ಪಂಚಮಿಯ ಕಥೆಯನ್ನು ಕೇಳುವುದು ಒಳ್ಳೆಯದು.

ಶ್ರಾವಣ ಮಾಸದ ಶುಕ್ಲಪಕ್ಷ ಪಂಚಮಿಯಂದು ಆಚರಿಸಲಾಗುವ ನಾಗರಪಂಚಮಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ಹಬ್ಬಗಳಲ್ಲಿ ಒಂದು. ಅಂದು ಮಹಿಳೆಯರು ನಾಗರಾ...
25/07/2020

ಶ್ರಾವಣ ಮಾಸದ ಶುಕ್ಲಪಕ್ಷ ಪಂಚಮಿಯಂದು ಆಚರಿಸಲಾಗುವ ನಾಗರಪಂಚಮಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ಹಬ್ಬಗಳಲ್ಲಿ ಒಂದು. ಅಂದು ಮಹಿಳೆಯರು ನಾಗರಾಜನಿಗೆ ತನಿಯೆರೆದು ತಮ್ಮ ಸೋದರ ಬಂಧುಗಳ ಶುಭಕೋರುತ್ತಾರೆ. ಬನ್ನಿ ಸರ್ಪರಾಜನನ್ನು ಭಕ್ತಿಯಿಂದ ಸ್ಮರಿಸೋಣ🌷🐍🐍

ಭುಜಂಗೇಶಾಯ ವಿದ್ಮಹೇ ಸರ್ಪರಾಜಾಯ ಧೀಮಹಿ ।
ತನ್ನೋ ನಾಗಃ ಪ್ರಚೋದಯಾತ್ ॥

╶◄◡◠◡◠◡◠◡॥ ಸರ್ಪಸೂಕ್ತಮ್ ॥ ◡◠◡◠◡◠◡►╴

●ಬ್ರಹ್ಮಲೋಕೇಷು ಯೇ ಸರ್ಪಾಃ ಶೇಷನಾಗ ಪರೋಗಮಾಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 1॥
●ಇಂದ್ರಲೋಕೇಷು ಯೇ ಸರ್ಪಾ ವಾಸುಕಿ ಪ್ರಮುಖಾದಯಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 2॥
●ಕದ್ರವೇಯಶ್ಚ ಯೇ ಸರ್ಪಾಃ ಮಾತೃಭಕ್ತಿಪರಾಯಣಾಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 3॥
●ಇಂದ್ರಲೋಕೇಷು ಯೇ ಸರ್ಪಾಃ ತಕ್ಷಕಾಃ ಪ್ರಮುಖಾದಯಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 4॥
●ಸತ್ಯಲೋಕೇಷು ಯೇ ಸರ್ಪಾ ವಾಸುಕೀನಾ ಚ ರಕ್ಷಿತಾಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 5॥
●ಮಲಯೇ ಚೈವ ಯೇ ಸರ್ಪಾಃ ಕರ್ಕೋಟಕ ಪ್ರಮುಖಾದಯಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 6॥
●ಪೃಥಿವ್ಯಾಂ ಚೈವ ಯೇ ಸರ್ಪಾ ಯೇ ಸಾಕೇತ ವಾಸಿತಾಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 7॥
●ಸರ್ವಗ್ರಾಮೇಷು ಯೇ ಸರ್ಪಾ ವಸಂತಿಷು ಸಂಚ್ಛಿತಾಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 8॥
●ಗ್ರಾಮೇ ವಾ ಯದಿ ವಾಽರಣ್ಯೇ ಯೇ ಸರ್ಪಾಃ ಪ್ರಚರಂತಿ ಚ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 9॥
●ಸಮುದ್ರತೀರೇ ಯೇ ಸರ್ಪಾ ಯೇ ಸರ್ಪಾ ಜಲವಾಸಿನಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 10॥
●ರಸಾತಲೇಷು ಯೇ ಸರ್ಪಾ ಅನಂತಾದಿ ಮಹಾಬಲಾಃ ।
ನಮೋಽಸ್ತು ತೇಭ್ಯಃ ಸರ್ಪೇಭ್ಯಃ ಸುಪ್ರೀತೋ ಮಮ ಸರ್ವದಾ ॥ 11॥
ಇತಿ ಸರ್ಪಸೂಕ್ತಂ ಸಂಪೂರ್ಣಮ್
_____________________________________________
🌹 ಶ್ರೀಕೃಷ್ಣಾರ್ಪಣಮಸ್ತು 🌹....

ನೀನೆ ಕುಣಿಸುವೆ ಜೀವರನು - ಶಂಕರ ನಾರಾಯಣ ‼ಒಬ್ಬ ಮಹಾಶಿವಭಕ್ತನಿದ್ದ. ಅವನದೊಂದು ವ್ರತವಿತ್ತು. ಅದೆಂದರೆ ಎಲ್ಲಿ ಶಿವ ದೇವಾಲಯ ಕಾಣುತ್ತದೆಯೋ ಅಲ್ಲ...
09/07/2020

ನೀನೆ ಕುಣಿಸುವೆ ಜೀವರನು - ಶಂಕರ ನಾರಾಯಣ ‼
ಒಬ್ಬ ಮಹಾಶಿವಭಕ್ತನಿದ್ದ. ಅವನದೊಂದು ವ್ರತವಿತ್ತು. ಅದೆಂದರೆ ಎಲ್ಲಿ ಶಿವ ದೇವಾಲಯ ಕಾಣುತ್ತದೆಯೋ ಅಲ್ಲಿ ಶಿವನನ್ನು ಪೂಜಿಸುವುದು; ಹಾಗೂ ಯಾವುದೇ ಸಂದರ್ಭದಲ್ಲಿಯೂ ವಿಷ್ಣುವನ್ನು ಪೂಜೆ ಮಾಡಬಾರದು ಎಂಬುದು ಅವನ ಸಂಕಲ್ಪ. ಈ ವ್ರತದಂತೆ ಅವನು ಅನು ದಿನವೂ ಶಿವನನ್ನೇ ಪೂಜಿಸುತ್ತಾ ವಿಷ್ಣುವಿಗೆ ಪೂಜೆಸಲ್ಲದಂತೆ ಎಚ್ಚರವಹಿಸುತ್ತಾ ಬಂದ. ಒಮ್ಮೆ ಅವನು ಒಂದು ದೇವಸ್ಥಾನಕ್ಕೆ ಬರುತ್ತಾನೆ. ಅದು ಶಂಕರನಾರಾಯಣ ದೇವಸ್ಥಾನವಾಗಿರುತ್ತದೆ. ಅವನಿಗೆ ಈಗ ತುಂಬ ಸಂದಿಗ್ಧವಾಗುತ್ತದೆ. ಏಕೆಂದರೆ ದೇವಾಲಯದಲ್ಲಿ ಶಿವ ವಿಷ್ಣು ಒಂದೇ ವಿಗ್ರಹದಲ್ಲಿ ಇರುತ್ತಾರೆ. ಅರ್ಧ ಶಿವ ಇನ್ನರ್ಧ ವಿಷ್ಣು. ಏನು ಮಾಡಲಿ? ಎಂದು ಚಿಂತಿತನಾಗುತ್ತಾನೆ. ಶಿವನನ್ನು ಪೂಜಿಸದಿದ್ದರೆ ವ್ರತಭಂಗವಾಗುತ್ತದೆ. ಹಾಗೇ ವಿಷ್ಣುವನ್ನು ಪೂಜಿಸಿದರೂ ಸಂಕಲ್ಪ ಭಂಗವಾಗುತ್ತದೆ.
ಕೊನೆಯಲ್ಲಿ ಅವನು ಒಂದು ತೀರ್ಮಾನಕ್ಕೆ ಬಂದು ಏನೇ ಆಗಲಿ ವ್ರತ ಭಂಗ ಮಾಡಬಾರದು ಎಂದು ವಿಗ್ರಹದಲ್ಲಿ ಶಿವನ ಭಾಗಕ್ಕೆ ಮಾತ್ರ ಅಭಿಷೇಕ, ಪುಷ್ಪಾರ್ಚನೆ, ಆರತಿ, ನೈವೇದ್ಯ ಮಾಡುತ್ತಾನೆ. ಧೂಪ, ದೀಪ ವಿಷ್ಣುವಿನ ಭಾಗಕ್ಕೆ ಹೋಗದಂತೆ ಕೈ ಅಡ್ಡ ಇಟ್ಟು ನೆರವೇರಿಸುತ್ತಾನೆ. ಪೂಜೆಯಿಂದ ಕೃತಾರ್ಥನಾಗಿ ಶಿವನಿಗೆ ನಮಸ್ಕಾರ ಮಾಡಿ ಏಳುತ್ತಾನೆ.
ಆಗ ವಿಷ್ಣು ಪ್ರತ್ಯಕ್ಷನಾಗಿ ಬಿಡುತ್ತಾನೆ. ಶಿವಭಕ್ತನಿಗೆ ಪರಮಾಶ್ಚರ್ಯವಾಗಿ, ದಿಗ್ಭ್ರಾಂತನಾಗಿ ನಿಂತಿರುವಾಗ ವಿಷ್ಣು ಹೇಳುತ್ತಾನೆ- “ನೀನು ಶಿವನನ್ನು ಆರಾಧಿಸುವಾಗ, ವ್ರತಮಾಡುವಾಗಲೆಲ್ಲ ನನಗೆ ಪೂಜೆ ಸಲ್ಲಬಾರದು ಎಂದು ನಿನ್ನ ಗಮನ ನನ್ನ ಕಡೆಗಿತ್ತು, ನನ್ನನ್ನೇ ಆರಾದಿಸುತ್ತಿತ್ತು ಹಾಗಾಗಿ ನಾನೆ ಬಂದೆ ಅನ್ನುತ್ತಾನೆ ಶ್ರೀ ಹರಿ.
ಹೀಗೆ ನಾವು ಯಾವುದನ್ನು ನಿರ್ಲಕ್ಷ್ಯ ಮಾಡಲು ಪ್ರಯತ್ನ ಮಾಡುತ್ತೇವೆಯೋ ಅದರೆಡೆಗೆ ನಮ್ಮ ಮನಸ್ಸು ಇರುತ್ತದೆ. ಅವನು ಬೇಡ ಅಂದರೆ ಆ ಕಡೆಯೇ ನಮ್ಮ ಗಮನ. ಅವನನ್ನು ತುಳಿದು ಬದುಕಬೇಕೆಂದರೆ ಅದರತ್ತವೇ ನಮ್ಮ ಚಿತ್ತ. ಹಾಗಾಗಿ ನಾವು ನಮ್ಮ ಮನದಲ್ಲಿ ಸದ್ವಿಚಾರದ ಚಿಂತೆ ಮಾಡ ಬೇಕು. ಬೇಡದ ಆಗದ ವಿಷಯದ ಕಡೆಗೆ ನಮ್ಮ ಗಮನ ಹೋಗದಂತೆ ಎಚ್ಚರವಹಿಸೋಣವೇ...?ಸದಾ ಆ ಭಗವಂತನ ಚಿಂತನೆ ಮಾಡುತ್ತ ಸತ್ಕಾರ್ಯದ ಕಡೆಗೆ ನಮ್ಮ ಮನಸ್ಸು ಮತ್ತು ಗಮನ ಹರಿಸೋಣವಲ್ಲವೆ.

ಕೃಷ್ಣಾರ್ಪಣಮಸ್ತು
(ಸತ್ಸಂಗ ಸಂಗ್ರಹ)

 #ಗುರು_ಪೂರ್ಣಿಮೆ_ಮಹತ್ವ ಆಷಾಢ ಮಾಸದ ಹುಣ್ಣಿಮೆಯ ದಿನ ನಾವು ಆಚರಿಸುವ ಶ್ರೇಷ್ಠವಾದ ಹಬ್ಬವೆಂದರೆ “ಗುರು ಪೂರ್ಣಿಮೆ”. ಈ ದಿನ ನಾವು ನಮ್ಮ ಗುರುಗಳ...
04/07/2020

#ಗುರು_ಪೂರ್ಣಿಮೆ_ಮಹತ್ವ

ಆಷಾಢ ಮಾಸದ ಹುಣ್ಣಿಮೆಯ ದಿನ ನಾವು ಆಚರಿಸುವ ಶ್ರೇಷ್ಠವಾದ ಹಬ್ಬವೆಂದರೆ “ಗುರು ಪೂರ್ಣಿಮೆ”. ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನ. ಗುರುವಿನ ಮಹತ್ವವನ್ನು ಸಾರುವ ದಿನ. ಗುರು ನಮಗೆ ಜೀವನದಲ್ಲಿ ಸರಿಯಾದ ದಿಕ್ಕು ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ, ಪರಮಾತ್ಮನ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮವನ್ನು ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟಲು ಸಹಾಯ ಮಾಡುವವನೇ “ಗುರು”. ಹುಡುಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವು ಗುರುವಿನ ಮುಖಾಂತರವೇ ಪರಮಾತ್ಮನ ಅರಿವು ಅರಿಯಬೇಕಾಗಿರುವುದರಿಂದ, ನಾವು ಆಷಾಢ ಪೌರ್ಣಮಿಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ಅಂತರಂಗದಲ್ಲೇ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲವೆಂಬ ಭಾವ ನಮ್ಮಲ್ಲಿ ಸದಾ ಜಾಗೃತವಾಗಿಟ್ಟುಕೊಂಡು, ಗುರುವಿನಲ್ಲಿ ಶರಣಾದರೆ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಸಫಲವಾಗುತ್ತದೆ.

ಉಪನಿಷತ್ತಿನ ಪ್ರಕಾರ “ಗು” ಎಂದರೆ ಅಂಧಕಾರವೆಂದೂ “ರು” ಎಂದರೆ ದೂರೀಕರಿಸುವವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಗೆ ನಡೆಸುವವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ಗುರು ಎಂದು ಅರ್ಥೈಸಬಹುದೇನೋ.

ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಿಲಾಗಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ

ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ |

ಆದಿಗುರು ಶ್ರೀ ಶಂಕರಾಚಾರ್ಯರು ಗುರು ಸ್ತೋತ್ರವನ್ನು ಹೀಗೆ ಹೇಳುತ್ತಾರೆ :

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |

ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ಬ್ರಹ್ಮ, ವಿಷ್ಣು ಮತ್ತು ಮಹೇಶ್ವರನ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ.

ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ |

ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮಃ ||

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳಿಗೆಗೆ ಬೇಕಾದ ಸೋಪಾನವನ್ನು ಹತ್ತಿಸುವ, ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.

ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ |

ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ ||

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಬೇರೆ ಯಾವುದೂ ಇಲ್ಲ. ಜ್ಞಾನದ ದಾರಿದೀಪ ತೋರುವವನಾದ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ.

ಶಾಶ್ವತವಾದ ಆನಂದವನ್ನು ಹೊಂದುವುದು ಸದ್ಗುರುವಿನ ಅನುಗ್ರಹದಿಂದ ಮಾತ್ರವೇ ಸಾಧ್ಯವೆಂದು ಶ್ರೀ ಶಂಕರಾಚಾರ್ಯರು ತಮ್ಮ ಗುರ್ವಷ್ಟಕಮ್ ನಲ್ಲಿ ಕೂಡ ಹೀಗೆ ಹೇಳಿದ್ದಾರೆ :

ಶರೀರಂ ಸುರೂಪಂ ತಥಾ ವಾ ಕಲತ್ರಂ

ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ||೧||

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂ

ಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್ ||೨||

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ.

ಷಡಂಗಾದಿವೇದೋ ಮುಖೇ ಶಾಸ್ತ್ರವಿದ್ಯಾ

ಕವಿತ್ವಾದಿ ಗದ್ಯಂ ಸುಪದ್ಯಂ ಕರೋತಿ ||೩||

ವೇದ, ಶಾಸ್ತ್ರ ಪಾರಂಗತನಾಗಿ ಅನೇಕ ವಿದ್ಯೆಗಳನ್ನು ತಿಳಿದವನಾಗಿದ್ದರೂ ಕೂಡ ಸದ್ಗುರುವಿನ ಚರಣಗಳಲ್ಲಿ ನಿಷ್ಠೆ ಇಡದಿದ್ದರೆ ಮುಕ್ತಿಯಿಲ್ಲ.

ವಿದೇಶೇಷು ಮಾನ್ಯಃ ಸ್ವದೇಶೇಷು ಧನ್ಯಃ

ಸದಾಚಾರವೃತ್ತೇಷು ಮತ್ತೋ ನಾ ಚಾನ್ಯಃ ||೪||

ವಿದೇಶಗಳಲ್ಲಿ ತುಂಬಾ ಹೆಸರು ಮಾಡಿ, ಸ್ವದೇಶದಲ್ಲಿ ಆಚಾರ ಪಾಲಿಸಿ, ಎಲ್ಲರಿಗಿಂತ ಶ್ರೇಷ್ಠ ವ್ಯಕ್ತಿ ಎಂಬ ಹೆಸರು ಪಡೆದಿದ್ದರೂ ಸಹ ಗುರುಚರಣಗಳಲ್ಲಿ ಭಕ್ತಿ ಇಲ್ಲದವನ ಜೀವನ ನಿರರ್ಥಕ.

ಕ್ಷಮಾಮಂಡಲೇ ಭೂಪಭೂಪಾಲಬೃಂದೈ:

ಸದಾ ಸೇವಿತಂ ಯಸ್ಯ ಪಾದಾರವಿಂದಮ್ ||೫||

ಭೂಮಂಡಲದಲ್ಲಿ ಅನೇಕರಿಂದ ಪಾದ ಪೂಜಿಸಿ ಕೊಳ್ಳುವಂತಹ ವ್ಯಕ್ತಿಯಾಗಿದ್ದರೂ ಕೂಡ ತನ್ನ ಗುರುಗಳ ಪಾದ ಪೂಜಿಸದವನು ಮೇರು ವ್ಯಕ್ತಿತ್ವದವನಾಗಿದ್ದರೂ ವ್ಯರ್ಥವೇ.

ಯಶೋ ಮೇ ಗತಂ ದಿಕ್ಷು ದಾನಪ್ರತಾಪಾತ್

ಜಗದ್ವಸ್ತು ಸರ್ವಂ ಕರೇ ಯತ್ಪ್ರಸಾದಾತ್ ||೬||

ಅನೇಕ ದಾನ ಧರ್ಮಗಳನ್ನು ಮಾಡಿ ಇಡೀ ಜಗತ್ತನ್ನೇ ಗೆದ್ದಿರುವೆನೆಂದು ಕೊಂಡಾಗಲೂ ಅವನು ತನ್ನ ಗುರುವಿನ ಅನುಗ್ರಹಕ್ಕೆ ಪಾತ್ರನಾಗದಿದ್ದರೆ ಎಲ್ಲವೂ ತೃಣ ಮಾತ್ರವೇ.

ನ ಭೋಗೇ ನ ಯೋಗೇ ನ ವಾ ವಾಜಿರಾಜೌ

ನ ಕಾಂತಾಮುಖೇ ನೈವ ವಿತ್ತೇಷು ಚಿತ್ತಮ್ ||೭||

ಲೌಕಿಕದ ಎಲ್ಲಾ ವ್ಯಾಪಾರಗಳಲ್ಲಿ ಆಸಕ್ತಿ ತೊರೆದಿದ್ದರೂ ಕೂಡ ಆ ವ್ಯಕ್ತಿಯ ಮನಸ್ಸು ಅಚಲವಾಗಿ ಗುರು ಚರಣಗಳಲ್ಲಿ ಶ್ರದ್ಧೆ ಹೊಂದಿರದಿದ್ದರೆ ಅವನ ವೈರಾಗ್ಯ ಉಪಯೋಗವಿಲ್ಲದ್ದು, ಮೋಕ್ಷವನ್ನು ಹೊಂದಲಾರ.

ಅರಣ್ಯೇ ನ ವಾ ಸ್ವಸ್ಯ ಗೇಹೇ ನ ಕಾರ್ಯೇ

ನ ದೇಹೇ ಮನೋ ವರ್ತತೇ ಮೇ ತ್ವನರ್ಘ್ಯೇ ||೮||

ಸಮಸ್ತವನ್ನೂ ತ್ಯಜಿಸಿ, ಅರಣ್ಯದಲ್ಲಿ ವಾಸಿಸಿದರೂ ಕೂಡ, ಗುರುಚರಣಗಳಿಗೆ ಶರಣಾಗತನಾಗದಿದ್ದರೆ ಆತ ಸಂಸಾರ ಬಂಧನದಿಂದ ಮುಕ್ತನಾಗುವುದು ಸುಳ್ಳು.

ಹೀಗೆ ಮೇಲಿನ ಶ್ಲೋಕಗಳಲ್ಲಿ ನಾವು ಬದುಕಿನಲ್ಲಿ ಏನೆಲ್ಲಾ ಸಾಧಿಸಿದ್ದರೂ, ತ್ಯಜಿಸಿದ್ದರೂ, ಗುರುವಿನ ಕರುಣೆ ಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಸುತ್ತಾಪ್ರತಿಯೊಂದು ಶ್ಲೋಕದ ಕೊನೆಗೂ ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೇ | ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ || ಎಂಬ ಮಾತನ್ನು ಪದೇ ಪದೇ ಪುನಶ್ಚರಣ ಮಾಡುತ್ತಾ ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾಧ್ಯ ಎನ್ನುತ್ತಾ ಗುರುವಿನ ಮಹತ್ವವನ್ನು ವಿವರಿಸುತ್ತಾರೆ.

ಆದಿ ಗುರು ಶ್ರೀ ಶಂಕರಾಚಾರ್ಯರು ಹಿಂದೂ ಧರ್ಮದಪುನರ್ಸ್ಥಾಪನೆ ಮತ್ತು ಪ್ರಚಾರ ಕಾರ್ಯಕ್ಕಾಗಿಯೇ ಬಂದವರು. ಅವರು ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದರು. ನಂತರ ಬಂದವರು ಶ್ರೀ ರಾಮಾನುಜಾಚಾರ್ಯರು ಮತ್ತು ಇವರು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದರು. ಇವರಿಬ್ಬರ ನಂತರ ಬಂದವರು ಶ್ರೀ ಮಧ್ವಾಚಾರ್ಯರು. ಆಚಾರ್ಯ ತ್ರಯರೆಂದೇ ಗುರುತಿಸಲ್ಪಡುವರು ನಮ್ಮ ಈ ಮೂವರು ಶ್ರೇಷ್ಠ ಗುರುಗಳು. ಅದ್ವೈತ, ವಿಶಿಷ್ಟಾದ್ವೈತ ಹಾಗೂ ದ್ವೈತ ಸಿದ್ಧಾಂತಗಳನ್ನು ಅನುಸರಿಸುವ ಗುರು ಪರಂಪರೆಯೇ ಬೆಳೆಯಿತು ಮತ್ತು ಈಗಲೂ ಅನೇಕ ಶಾಖೆಗಳಾಗಿ ವಿಭಜಿತವಾಗಿದ್ದರೂ, ಪರಂಪರೆ ಮುಂದುವರೆದಿದೆ. ಈ ಪರಂಪರೆಯಲ್ಲಿ ಈಗಿರುವ ಗುರುವಿನ ಗುರುವಿಗೆ ಪರಮಗುರು ಎಂದೂ, ಪರಮ ಗುರುವಿನ ಗುರುವನ್ನು ಪರಾಪರ ಗುರು ಎಂದೂ, ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ ಯಂದುಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ.

ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರವೆಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನು ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜೊತೆಗೇ “ಗುರು ಪೂರ್ಣಿಮೆ” ಯಂದು ಪೂಜಿಸುತ್ತೇವೆ.ಲೋಕಗುರು ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜೊತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು.ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ.

“ಗುರು” ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಶಕ್ತಿ ಎಂದು ಅರ್ಥೈಸಿ ಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ. ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬಾ ಚೈತನ್ಯದಾಯಕವಾಗಿರುತ್ತದೆ. ಗುರುವಿಗೆ ಯಾವಾಗಲೂ ಶಿಷ್ಯನ

ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ.ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ.

ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಕೈವಾರ ತಾತಯ್ಯ ಎಂದೇ ಪ್ರಸಿದ್ಧರಾಗಿರುವ ಶ್ರೀ ಯೋಗಿನಾರೇಯಣರ ಬ್ರಹ್ಮಾಂಡಪುರಿ ಶತಕದಲ್ಲಿ ಕೂಡ ತಾತಯ್ಯನವರು ಗುರುವಿನ ಮಹತ್ವವನ್ನು ಸಾರುವ ಮಾತುಗಳನ್ನು ಆಡಿದ್ದಾರೆ :

ಬ್ರಹ್ಮರುದ್ರುಲಕೈನ – ಭಾವಿಂಪ ಶಕ್ಯಮಾ

ಆಧ್ಯಾತ್ಮವಿದ್ಯ ಗುರುಕೀಲು ಮಹಿಮ

ಆಧ್ಯಾತ್ಮ ವಿದ್ಯೆಗೆ ಗುರುವಿನ ಮಾರ್ಗದರ್ಶನ ಬೇಕೇ ಬೇಕು ; ಗುರುವಿಲ್ಲದಿದ್ದರೆ ಬ್ರಹ್ಮರುದ್ರರಿಗೂ ಅವಶಕ್ಯ. ಆತ್ಮ ಸಾಕ್ಷಾತ್ಕಾರವಾಗಲು ಆಧ್ಯಾತ್ಮವಿದ್ಯ “ಗುರುಕೀಲು ಮಹಿಮೆ” – ಎಂಬುದು ಆಳವಾದ ತತ್ವಾರ್ಥ ಪದ. ಇದು ಮನಸ್ಸಿನ ಸಂಸ್ಕಾರಕ್ಕೆ ಹತ್ತಿರವಾದದ್ದು. ಭ್ರಮೆಗಳನ್ನು ಸ್ಪಷ್ಟವಾಗಿ ಹೇಳಿದ್ದಾರೆ. “ಗುರುಕೀಲು” ಎಂದರೆ ಗುರುದೇವನು ಕಲಿಸಿಕೊಟ್ಟ ಕೀಲಿಕೈನಂತಹ ಸಾಧನಸೂತ್ರವೆಂದು ಅರ್ಥವಾಗುತ್ತದೆ. ತಾತಯ್ಯನವರು ಗುರುವಿಗೆ ‘ಮಾತೃಸ್ಥಾನ’ ಕೊಟ್ಟಿದ್ದಾರೆ. ಯೋಗ್ಯ ಹಾಗೂ ಸದ್ಗುರುವಿನ ಪಾದಗಳಿಗೆ ಶರಣಾದರೆ ಆತ ಉಪದೇಶ ಕೊಟ್ಟು ಉದ್ಧರಿಸುತ್ತಾನೆ. ನೀನು ಹುಡುಕುತ್ತಿರುವ ಕುರಿಮರಿ ನಿನ್ನ ಕಂಕುಳಲ್ಲೇ ಇದೆ ಎಂದು ನಮ್ಮಲ್ಲೇ ಇರುವ ದೇವರನ್ನು ತೋರಿಸುತ್ತಾನೆ, ಸಾಧನಮಾರ್ಗ ಕಲಿಸುತ್ತಾನೆ. ಅದೇ ಗುರುಮಾರ್ಗ, ಅದು ಗುರುಸೂತ್ರ, ಅದೇ ಗುರುಕೀಲು. ಮನಸ್ಸನ್ನು ನಿಲ್ಲಿಸಲು ಜ್ಞಾನಬೋಧೆ ಮಾಡಿ ಗುರುವು ಸಾಧನಮಾರ್ಗ ತೋರಿಸುತ್ತಾನೆ. ಗುರು ಪರಂಪರೆ ಹಾಗೂ ಗುರು-ಶಿಷ್ಯರ ಅತ್ಯಂತ ನಿಕಟ ಸಂಬಂಧವು ಮುಂದುವರೆದು ನಮ್ಮ ದಾಸಸಾಹಿತ್ಯದಲ್ಲೂ ಗಾಢವಾಗಿ ಕಾಣಬಹುದಾಗಿದೆ.

ಶಿವಾರ್ಪಣಮಸ್ತು

#ಗುರು_ಪರಂಪರಾ
#ಸದ್ವಿಚಾರ_ತರಂಗ

Address

D. No. 15 W. No. 12 Mullangi Papamma Lane Opp Sharada Tutorials, Reddy Street
Bellary
583101

Opening Hours

Monday 9am - 8pm
Tuesday 9am - 8pm
Wednesday 9am - 8pm
Thursday 9am - 8pm
Friday 9am - 8pm
Saturday 9am - 8pm
Sunday 9am - 5pm

Telephone

+919164549838

Alerts

Be the first to know and let us send you an email when Chaturvedi Jyothishalayam Ballari posts news and promotions. Your email address will not be used for any other purpose, and you can unsubscribe at any time.

Contact The Business

Send a message to Chaturvedi Jyothishalayam Ballari:

Share